ಮಧ್ಯಪ್ರದೇಶದಲ್ಲಿ ನುಜ್ಜುಗುಜ್ಜಾದ ರೈಲ್ವೇ ಬೋಗಿ
ಶಿವಪುರಿ,
ಸೆ.20: ಇಲ್ಲಿಗೆ ಸಮೀಪದ ಬದರ್ವಾಸ್ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ 4.45ರ ಸುಮಾರಿಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸುಮಾರು 15 ಜನ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮೂರು ಬೋಗಿಗಳು ಸಂಪೂರ್ಣ ಜಖಂಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಸ್ಥಳೀಯ ಎಸ್ ಪಿ ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. id="toptextpromo">ಭೀಕರ
ಮಳೆಯ ನಡುವೆ ಇಂದು ಮುಂಜಾನೆ ಬದರ್ವಾಸ್ ನಿಲ್ದಾಣಕ್ಕೆ ಬರುತ್ತಿದ್ದ ಗೂಡ್ಸ್ ರೈಲಿಗೆ ನಿಲ್ದಾಣದಲ್ಲಿ ನಿಂತಿದ್ದ ಇಂದೋರ್ -ಗ್ವಾಲಿಯರ್ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಕಾಣಿಸದೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. id='are-slot-1' class='oiad oi-axt oiadv'> id='top-searched-articles'>ಗಾಯಾಳುಗಳನ್ನು
55 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಪ್ರತಿಕೂಲ ಹವಾಮಾನದ ಕಾರಣ, ಪರಿಹಾರ ಕಾರ್ಯದಲ್ಲಿ ವಿಳಂಬ ಉಂಟಾಗುತ್ತಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪ್ರತಿ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಧನವನ್ನು ರೈಲ್ವೇ ಇಲಾಖೆ ಘೋಷಿಸಿದೆ.











Click it and Unblock the Notifications