ಸೆ.24ಕ್ಕೆ ರಾಯಣ್ಣ ಪ್ರತಿಮೆ ಸಿಎಂರಿಂದ ಅನಾವರಣ

ನಗರದ ಖೋಡೆ ವೃತ್ತದಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾವರಣಗೊಳಿಸಲಿದ್ದಾರೆ. ಈ ಸಮಾರಂಭಕ್ಕಾಗಿ ಬಿಬಿಎಂಪಿ ಸಕಲ ಸಿದ್ಧತೆ ನಡೆಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಪದಾಧಿಕಾರಿಗಳು ಬಿಬಿಎಂಪಿ ಜೊತೆಗೆ ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿದ್ದಾರೆ.
ಎಲ್ಲಾ ಗಣ್ಯರಿಗೂ ಆಹ್ವಾನ: ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಧುರೀಣ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪೂರ, ಕುರುಬರ ಸಂಘದ ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ಗಳಾದ ರಾಮಚಂದ್ರಪ್ಪ, ಜೆ.ಹುಚ್ಚಪ್ಪ ಹಾಗೂ ಇತರ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಶಾಸಕ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ಎಸ್.ಕೆ.ನಟರಾಜ್, ಉಪಮೇಯರ್ ದಯಾನಂದ್, ಸಂಸತ್ ಸದಸ್ಯರು, ಬಿಬಿಎಂಪಿಯ ಆಡಳಿತ, ಪ್ರತಿಪಕ್ಷಗಳ ನಾಯಕರು, ಸ್ಥಳೀಯ ಕಾರ್ಪೊರೇಟರ್ಗಳು ಹಾಗೂ ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications