ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.24ಕ್ಕೆ ರಾಯಣ್ಣ ಪ್ರತಿಮೆ ಸಿಎಂರಿಂದ ಅನಾವರಣ

By Mahesh
|
Google Oneindia Kannada News

Sangolli Rayannna
ಬೆಂಗಳೂರು, ಸೆ.20: ಕೆಲ ವರ್ಷಗಳಿಂದ ಮುಸುಕಿನೊಳಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕೊನೆಗೂ ಮುಕ್ತಿ ನೀಡುವ ಮಹೂರ್ತವನ್ನು ಸರ್ಕಾರ ಹಾಗೂ ಬಿಬಿಎಂಪಿ ನಿರ್ಧರಿಸಿದೆ. ಸೆ.24ರಂದು ಪ್ರತಿಮೆ ಅನಾವರಣ ಸಮಾರಂಭ ನಿಗದಿಯಾಗಿದೆ ಎಂದು ಮೇಯರ್ ಎಸ್ ಕೆ ನಟರಾಜ್ ತಿಳಿಸಿದ್ದಾರೆ.

ನಗರದ ಖೋಡೆ ವೃತ್ತದಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾವರಣಗೊಳಿಸಲಿದ್ದಾರೆ. ಈ ಸಮಾರಂಭಕ್ಕಾಗಿ ಬಿಬಿಎಂಪಿ ಸಕಲ ಸಿದ್ಧತೆ ನಡೆಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಪದಾಧಿಕಾರಿಗಳು ಬಿಬಿಎಂಪಿ ಜೊತೆಗೆ ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿದ್ದಾರೆ.

ಎಲ್ಲಾ ಗಣ್ಯರಿಗೂ ಆಹ್ವಾನ: ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.

ಕಾಂಗ್ರೆಸ್ ಧುರೀಣ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪೂರ, ಕುರುಬರ ಸಂಘದ ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್‌ಗಳಾದ ರಾಮಚಂದ್ರಪ್ಪ, ಜೆ.ಹುಚ್ಚಪ್ಪ ಹಾಗೂ ಇತರ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಶಾಸಕ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ಎಸ್.ಕೆ.ನಟರಾಜ್, ಉಪಮೇಯರ್ ದಯಾನಂದ್, ಸಂಸತ್ ಸದಸ್ಯರು, ಬಿಬಿಎಂಪಿಯ ಆಡಳಿತ, ಪ್ರತಿಪಕ್ಷಗಳ ನಾಯಕರು, ಸ್ಥಳೀಯ ಕಾರ್ಪೊರೇಟರ್‌ಗಳು ಹಾಗೂ ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X