ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಇಎಸ್, ಶಿವಸೇನೆ ನಿಷೇಧಿಸಿ : ಪ್ರವೀಣ್ ಕುಮಾರ ಶೆಟ್ಟಿ

By Mrutyunjaya Kalmat
|
Google Oneindia Kannada News

Karnataka Rakshana Vedike logo
ಬೆಂಗಳೂರು, ಸೆ. 21 : ಕನ್ನಡ, ಕನ್ನಡಿಗರ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

38ನೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದರೆ ಸೂಕ್ತ ಉತ್ತರ ನೀಡಲಾಗುವುದೆಂದು ಎಚ್ಚರಿಸಿದರು. ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿ ಅಂತಿಮ. ಇದನ್ನು ಬದಲಾಯಿಸಿದರೆ ಮಹಾರಾಷ್ಟ್ರ ಸರಕಾರ ಮತ್ತು ಕೇಂದ್ರ ಸರಕಾರದ ವಿರುದ್ಧ ಉಗ್ರ ಸ್ವರೂಪದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಇದೇ ಸಂದರ್ಭದಲ್ಲಿ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X