ಮಂದಿರ ಮಸೀದಿ ವಿವಾದ ಸೆ.24 ರಂದೇ ತೀರ್ಪು

Ayodhya verdict deferment plea put off
ನವದೆಹಲಿ, ಸೆ. 22 : ಅಯೋಧ್ಯೆಯ ವಿವಾದಿತ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ಇದ್ದ ಭೂಮಾಲಿಕತ್ವಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಉಚ್ಚ ನ್ಯಾಯಾಲಯ ಸೆಪ್ಟೆಂಬರ್ 24ರಂದು ನೀಡಲಿರುವ ಮಹತ್ವ ತೀರ್ಪನ್ನು ಮುಂದೂಡುವಂತೆ ರಮೇಶ್ ಚಂದ್ರ ತ್ರಿಪಾಠಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ನ ಎಕೆ ಪಟ್ನಾಯಕ್ ಹಾಗೂ ಅಲ್ತಾಮಸ್ ಕಬೀರ್ ಅವರಿದ್ದ ವಿಭಾಗೀಯ ಪೀಠ ತಿರಸ್ಕರಿಸಿದೆ.

ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ಪೀಠ, ಇದೊಂದು ಸಿವಿಎಲ್ ವಿವಾದ, ಇದರ ವಿಚಾರಣೆ ಇಲ್ಲಿ ನಡೆಸಲು ಸಾಧ್ಯವಿಲ್ಲ. ಈ ಬಗ್ಗೆ ಲಕ್ನೋ ಪೀಠದಲ್ಲೇ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತು.

ಅಯೋಧ್ಯೆ ವಿವಾದದ ತೀರ್ಪನ್ನು ಮುಂದೂಡಿ, ಮತ್ತು ಸೌಹಾರ್ದಯುತವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸಲು ಅವಕಾಶ ಕಲ್ಪಿಸುವಂತೆ ತ್ರಿಪಾಠಿ ಸೆ.17ರಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯಲ್ಲಿ ಯಾವುದೇ ಹುರುಳಿಲ್ಲವೆಂದು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ನಂತರ ಈ ಬಗ್ಗೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎಸ್.ಯು. ಖಾನ್, ನ್ಯಾ. ಡಿ.ವಿ. ಶರ್ಮಾ ಮತ್ತು ನ್ಯಾ. ಸುಧೀರ್ ಅಗರವಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠದಲ್ಲಿ ನ್ಯಾ. ಡಿವಿ ಶರ್ಮಾ ಹೊರತುಪಡಿಸಿ ಉಳಿದಿಬ್ಬರು ತ್ರಿಪಾಠಿ ಹೂಡಿದ್ದ ಅರ್ಜಿಯನ್ನು ತಿರಸ್ಕರಿಸಿದ್ದರು. ಅರ್ಜಿಯಲ್ಲಿ ಪ್ರಾಮಾಣಿಕತೆಯ ಕೊರತೆಯಿದ್ದು, ನ್ಯಾಯಾಲಯದ ದಾರಿತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ತ್ರಿಪಾಠಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಂಡ ವಿಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+