ಬಾಬ್ರಿ ತೀರ್ಪು : ಶಾಂತಿ ಸಭೆಯಲ್ಲಿ ಯಾರ‌್ಯಾರು ಇದ್ರು

ಗೃಹ ಕಚೇರಿ ಕೃಷ್ಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಧಾರ್ಮಿಕ ಮುಖಂಡರ ಸಭೆಗೆ ಮುನ್ನ ಮುಖಂಡರು ಮುಖ್ಯಮಂತ್ರಿಯವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ಧಾರ್ಮಿಕ ಮುಖಂಡರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸಲು ಯತ್ನಿಸುವ ದುಷ್ಟಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಾಗುವುದು ಎಂದರು.
ಪ್ರಕರಣದ ತೀರ್ಪು ಯಾರ ಪರವೇ ಇರಲಿ ಅಥವಾ ಯಾರ ವಿರುದ್ಧವೇ ಇರಲಿ, ನಾವು ಸಮಾಧಾನ ಚಿತ್ತದಿಂದ ಸ್ವೀಕರಿಸಬೇಕಾಗಿದೆ. ಸಮಾಜದ ನೆಮ್ಮದಿಗೆ ಮತ್ತು ಸಹಜತೆಗೆ ಧಕ್ಕೆಯಾಗದಂತೆ ಎಲ್ಲರೂ ವರ್ತಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಮಂಗಳೂರಿನ ವಿವಿಧ ಧಾರ್ಮಿಕ ಮುಖಂಡರು ಈಗಾಗಲೇ ಕೋಮು ಸೌಹಾರ್ದ ಸಭೆ ನಡೆಸಿ ಸೂಕ್ಷ್ಮ ಪ್ರದೇಶವೆಂದು ಜನಜನಿತವಾಗಿರುವ ಈ ಭಾಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ಬದ್ಧತೆಯನ್ನು ಪ್ರಕಟಿಸಿದ್ದಾರೆ. ಇತರರೂ ಇದನ್ನು ಮಾದರಿಯಾಗಿ ಅನುಸರಿಸುವಂತೆ ಯಡಿಯೂರಪ್ಪ ಕೋರಿದರು.
ಕ್ರೈಸ್ತ ಧರ್ಮಗುರು ಬರ್ನಾಡ್ ಮೊರಸ್ ಪ್ರತಿನಿಧಿ, ರಾಮಕೃಷ್ಣ ಮಠದ ಸ್ವಾಮಿ ಹರ್ಷಾನಂದ, ಆದಿಚುಂಚನಗಿರಿ ಮಠದ ಡಾ.ಬಾಲಗಂಗಾಧರ ನಾಥ ಸ್ವಾಮಿ ಪ್ರತಿನಿಧಿ, ಮೌಲಾನ ಖದೀರ್ ಅಹ್ಮದ್ ಷಾ ಅದಾವುಲ್ ಆಮಿರಿ, ಮೌಲಾನ ಝಯೀಮ್ ರಝಾ ಆಬಿದಿ, ಕರ್ನಾಟಕ ಮುಸ್ಲಿಂ ಮುತ್ತಾಹಿದ್ ಮಹಾಜನ್ ಕಾರ್ಯದರ್ಶಿ ಎಸ್ ಎಂ ಇಕ್ಬಾಲ್, ರವಿಶಂಕರ್ ಗುರೂಜಿಯ ಪ್ರತಿನಿಧಿ, ವಿಶ್ವೇಶ್ವತೀರ್ಥರ ಪ್ರತಿನಿಧಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮಿಯ ಪ್ರತಿನಿಧಿ, ವಾಲ್ಮಿಕಿ ಮಹಾಸಂಸ್ಥಾನದ ಪ್ರತಿನಿಧಿ, ಮಾದಾರ ಚೆನ್ನಯ್ಯ ಸೇರಿದಂತೆ ವಿವಿಧ ಮಠಗಳ ಪ್ರತಿನಿಧಿಗಳು ತಮ್ಮ ಸಲಹೆಗಳನ್ನು ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಡಾ ವಿ ಎಸ್ ಆಚಾರ್ಯ, ಕಾನೂನು ಸಚಿವ ಎಸ್ ಸುರೇಶ್ ಕುಮಾರ್, ಆರ್ ಅಶೋಕ್, ಲಕ್ಷ್ಮಣ ಸವದಿ, ವೆಂಕಟರಮಣಪ್ಪ, ಸರಕಾರದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಅಜಯ್‌ಕುಮಾರ್ ಸಿಂಗ್, ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications