78ನೇ ವಸಂತಕ್ಕೆ ಕಾಲಿಟ್ಟ ಮನಮೋಹನ್ ಸಿಂಗ್

ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ಮನಮೋಹನ್ ಸಿಂಗ್‌ಗೆ ದೂರವಾಣಿ ಕರೆ ಮಾಡಿರುವ ಸೋನಿಯಾ ಗಾಂಧಿ, ಅವರ ಪುತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಶುಭಾಷಯ ಕೋರಿದ್ದಾರೆ. ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕರು ಪ್ರಧಾನಿ ಮನಮೋಹನ್ ಸಿಂಗ್‌ಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಕಳೆದ ವರ್ಷ ಪ್ರಧಾನಿ ಮನಮೋಹನ್ ಸಿಂಗ್ ತನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದರು. ಇದೀಗ ಪಾಕಿಸ್ತಾನದಲ್ಲಿ ರುವ ಪಶ್ಚಿಮ ಪಂಜಾಬ್ ನಲ್ಲಿ 1932ರ ಸೆಪ್ಟಂಬರ್ 26ರಂದು ಮನಮೋಹನ್ ಸಿಂಗ್ ಜನಿಸಿದ್ದಾರೆ.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ












Click it and Unblock the Notifications