ಬಳ್ಳಾರಿ ಪಾಲಿಕೆಯಲ್ಲಿ ಮತ್ತೆ ಅರಳಿದ ಕಮಲ

ಬಳ್ಳಾರಿ ನಗರ ಶಾಸಕರಾಗಿ ಆಯ್ಕೆ ಆದ ಜಿ. ಸೋಮಶೇಖರರೆಡ್ಡಿ ಅವರು ರಾಜೀನಾಮೆ ನೀಡಿದ್ದ 1ನೇ ವಾರ್ಡ್ನಲ್ಲಿ ಬಿಜೆಪಿಯ ಅಭ್ಯರ್ಥಿ ಪಾರ್ವತಿ ಎಸ್. ಇಂದುಶೇಖರ್ 8483 ಮತಗಳನ್ನು, ಪದ್ಮಾವತಿ ಜಿ. ಯಾದವ್ ಅವರ ಕೊಲೆಯಿಂದ ತೆರವಾಗಿದ್ದ ೧೯ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಎನ್. ಪಾರ್ವತಿ 7605 ಮತಗಳನ್ನು ಪಡೆದು ಅದ್ಭುತವಾದ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ.
1ನೇ ವಾರ್ಡ್ನಲ್ಲಿ ಕಾಂಗ್ರೆಸ್ನ ಜೆ.ವಿ. ಮಂಜುನಾಥ್ 686, ಜೆಡಿಎಸ್ನ ಎಂ.ಎಸ್. ಶಿವಾರೆಡ್ಡಿ 473 ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಪಾರ್ವತಿ ಎಸ್. ಇಂದುಶೇಖರ್ ಅವರು 7797 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ವಾರ್ಡ್ನಲ್ಲಿ 9807 ಮತಗಳು ಚಲಾವಣೆ ಆಗಿದ್ದು, 165ಮತಗಳು ತಿರಸ್ಕೃತಗೊಂಡಿವೆ.
19ನೇ ವಾರ್ಡ್ನಲ್ಲಿ ಜೆಡಿಎಸ್ನ ವೆಂಕಟಮ್ಮ 799 ಮತಗಳನ್ನು, ಬಿಜೆಪಿಯ ಎನ್. ಪಾರ್ವತಿ 7605 ಮತಗಳನ್ನು ಪಡೆದು 6806 ಮತಗಳ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈ ವಾರ್ಡ್ನಲ್ಲಿ 8513 ಮತಗಳು ಚಲಾವಣೆ ಆಗಿದ್ದು 109 ಮತಗಳು ತಿರಸ್ಕೃತಗೊಂಡಿವೆ.
ಸಿರುಗುಪ್ಪ: ಸಿರುಗುಪ್ಪ ಪುರಸಭೆಯ 2ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಈರಣ್ಣ 414ಮತಗಳನ್ನು ಪಡೆದು ಕೇವಲ 2 ಮತಗಳಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ನ ವೆಂಕಟೇಶನಾಯಕ ಅವರು 412 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಈ ವಾರ್ಡ್ನಲ್ಲಿ ೮೪೦ ಮತಗಳು ಚಲಾವಣೆ ಆಗಿದ್ದು, 14ಮತಗಳು ತಿರಸ್ಕೃತಗೊಂಡಿವೆ.
23ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ಬಿ.ಎಂ. ಮಂಗಳ ಅವರು 690ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಬಿ.ಎಂ. ತ್ರಿವೇಣಿ ಅವರು 342 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಕಾಂಗ್ರೆಸ್ನ ಬಿ.ಎಂ. ಮಂಗಳ 348 ಮತಗಳ ಅಂತರದಿಂದ ವಿಜೇತರಾಗಿದ್ದಾರೆ. ಈ ವಾರ್ಡ್ನಲ್ಲಿ 950 ಮತಗಳು ಚಲಾವಣೆ ಆಗಿದ್ದು 18 ಮತಗಳು ತಿರಸ್ಕೃತಗೊಂಡಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications