ಅ.1ರಿಂದ ಮೈಸೂರಿಗೆ ಕಿಂಗ್ ಫಿಷರ್ ವಿಮಾನಯಾನ

ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದ ಸಲಹಾ ಸಮಿತಿ ಅಧ್ಯಕ್ಷರಾದ ಸಂಸದ ಎಚ್. ವಿಶ್ವನಾಥ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರಿನಿಂದ ಮಧ್ಯಾಹ್ನ 12ಗಂಟೆಗೆ ಹೊರಡುವ ಕಿಂಗ್‌ಫಿಶರ್ ವಿಮಾನ ಮಧ್ಯಾಹ್ನ 12.45ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಮತ್ತೆ ಅದೇ ವಿಮಾನ ಮಧ್ಯಾಹ್ನ 2.45ಕ್ಕೆ ಹೊರಟು 3.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುತ್ತದೆ. ಪ್ರತಿ ಟಿಕೆಟ್ ಬೆಲೆ 2 ಸಾವಿರ ರುಗಳಾಗಿರುತ್ತದೆ. ಈ ಸೇವೆ ದಸರೆಗೆಸೀಮಿತವಲ್ಲ. ದಸರೆ ನಂತರವೂ ಈ ಸೇವೆ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.
ಮೈಸೂರು ಮಹರಾಜರ ಕನಸು: 1947ರಲ್ಲಿ ಮಂಡಕಳ್ಳಿ ಗ್ರಾಮದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಅಂದಿನ ಮಹಾರಾಜರು 168 ಎಕರೆ ಭೂಪ್ರದೇಶವನ್ನು ಮಂಜೂರು ಮಾಡಿದ್ದರು. 2005ರಲ್ಲಿ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ರಾಜ್ಯ ಸರಕಾರದ ಮಧ್ಯೆ ಆದ ಒಡಂಬಡಿಕೆ ಪ್ರಕಾರ ರಾಜ್ಯ ಸರಕಾರ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ನಾಗರಿಕ ವಿಮಾನಗಳ ಹಾರಾಟಕ್ಕೆ ಬೇಕಾದ ಪೂರಕ ವಾತಾವರಣವನ್ನು ಸೃಷ್ಟಿಸಿದೆ.
ಅದರ ಫಲವಾಗಿ ಅ 1ರಂದು ಮಧ್ಯಾಹ್ನ 12.45ಕ್ಕೆ ಕಿಂಗ್‌ಫಿಶರ್ ಸಂಸ್ಥೆಯ ವಿಮಾನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಈ ಮೊದಲ ನಾಗರಿಕ ವಿಮಾನದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಗಣ್ಯರು ಆಗಮಿಸುವ ನಿರೀಕ್ಷೆ ಇದೆ. ಈ ಮೊದಲ ವಿಮಾನದಲ್ಲಿ ಪ್ರಯಾಣ ಮಾಡುವವರನ್ನು ಸ್ವಾಗತಿಸಲು ಜಿಲ್ಲಾಡಳಿತ, ಸ್ಥಳೀಯ ಜನಪ್ರತಿನಿಧಿ ಗಳು ವಿಮಾನ ನಿಲ್ದಾಣದಲ್ಲಿ ಹಾಜರಿರುತ್ತಾರೆ ಎಂದು ವಿವರಿಸಿದರು.
ಕಿಂಗ್‌ಫಿಶರ್ ಸಂಸ್ಥೆ ಮಾಲೀಕ ವಿಜಯ್‌ಮಲ್ಯ ಅವರು ಕನ್ನಡಿಗರಾಗಿದ್ದು, ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಕನ್ನಡಿಗರಾಗಿ ಮೈಸೂರು ವಿಮಾನನಿಲ್ದಾಣಕ್ಕೆ ತಮ್ಮದೇ ಸಂಸ್ಥೆಯ ನಾಗರಿಕ ವಿಮಾನಗಳ ಹಾರಾಟ ಆರಂಭಿಸುವ ಮೂಲಕ ಬದ್ಧತೆ ಪ್ರದರ್ಶಿಸಿದ್ದಾರೆ. ಜೊತೆಗೆ ರಾಜ್ಯ ಸರಕಾರ ಹಾಗೂ ನಮ್ಮೆಲ್ಲರ ಕೋರಿಕೆಗೂ ಅವರು ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಾಗರಿಕ ವಿಮಾನಗಳ ಹಾರಾಟಕ್ಕೆ ಜೆಟ್ ಏರ್‌ವೆಸ್ ಕೂಡ ಮುಂದೆ ಬಂದಿದೆ. ಸದ್ಯದಲ್ಲೇ ಅದೂ ಕೂಡ ಕಿಂಗ್‌ಫಿಶರ್‌ನಂತೆ ತನ್ನ ಸೇವೆ ಆರಂಭಿಸಲಿದೆ. ಬೆಂಗಳೂರಿಗೆ ಮಾತ್ರ ಆರಂಭವಾಗಿರುವ ಈ ಸೇವೆ, ಮುಂದೆ ಕೇರಳದ ಕೊಚಿನ್, ಗೋವಾಕ್ಕೂ ವಿಸ್ತರಣೆಯಾಗಲಿದೆ. ವಿಮಾನಗಳಿಗೆ ಪ್ರಯಾಣಿಕರ ಒತ್ತಡ ಗಮನಿಸಿ ವಿಮಾನ ಸೇವೆ ಇನ್ನಷ್ಟು ವಿಸ್ತಾರವಾಗಲಿದೆ ಎಂದು ವಿಶ್ವನಾಥ್ ತಿಳಿಸಿದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications