ಬಾಬ್ರಿ ತೀರ್ಪು : ಪೇಜಾವರ ಶ್ರೀಗಳು ಸ್ವಾಗತ

ರಾಮನ ಜನ್ಮಭೂಮಿ ಅಯೋಧ್ಯೆಯ ವಿವಾದ ಬಹುಕಾಲಗಳಿಂದಲೂ ನೆನೆಗುದಿಗೆ ಬಿದ್ದಿದೆ. ಇದು ಶೀಘ್ರವೇ ಇತ್ಯರ್ಥಗೊಳ್ಳಬೇಕು ಎನ್ನುವುದು ನಮ್ಮ ಬಹುದಿನ ಬೇಡಿಕೆ. ಅಯೋಧ್ಯೆ ತೀರ್ಪಿಗೆ ತಡೆ ನೀಡಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ್ದು ಸ್ವಾಗತಾರ್ಹ ನಿರ್ಣಯವಾಗಿದೆ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.
ನ್ಯಾಯಾಲಯದ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು. ಪ್ರಚೋದನೆ ನೀಡುವಂತ ಚಟುವಟಿಕೆಗಳಲ್ಲಿ ಯಾರೂ ಪಾಲ್ಗೊಳ್ಳಬಾರದು. ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುವಂತ ಕೆಲಸ ಮಾಡುವುದು ಅಕ್ಷಮ್ಯ. ಎಲ್ಲರೂ ಶಾಂತಿ ಕಾಪಾಡಿ ಸೌಹಾರ್ದತೆಯನ್ನು ಮೆರೆಯಬೇಕು ಎಂದು ಶ್ರೀಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ದೇಶದ ಜನತೆ ನ್ಯಾಯಾಲಯದ ಆದೇಶವನ್ನು ಪಾಲಿಸಲೇಬೇಕು. ಅಯೋಧ್ಯೆ ವಿವಾದ ಇತ್ಯರ್ಥವಾಗುವುದನ್ನು ನಾವು ಎದುರು ನೋಡುತ್ತಿದ್ದೇವೆ. ಎಲ್ಲರೂ ಶಾಂತಿ ಕಾಪಾಡಬೇಕು. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತ ಕೆಲಸಕ್ಕೆ ಕೈಹಾಕಬಾರದು. ಇದರ ಜೊತೆಗೆ ಸರಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು. ಮಾಧ್ಯಮದ ಕೆಲಸವೂ ಇದರಲ್ಲಿ ಸಾಕಷ್ಟಿದೆ ಎಂದು ಮುಸ್ಲಿಂ ಚಿಂತಕ ಶೆರಿಯಾರ್ ಖಾನ್ ಹೇಳಿದ್ದಾರೆ.












Click it and Unblock the Notifications