ಗಾಂಧಿ ಜಯಂತಿಗೆ ನಿಷೇಧಾಜ್ಞೆ ಇಲ್ಲ: ಬಿದರಿ

ಆದರೆ, ಗಾಂಧಿ ಜಯಂತಿ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಂಕರ ಬಿದರಿ, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಭದ್ರತೆಗಾಗಿ ಕೇಂದ್ರದಿಂದ ಎರಡು ತುಕಡಿ ಸಿಆರ್‌ಪಿಎಫ್ ಕರೆಸಿಕೊಳ್ಳಲಾಗಿದ್ದು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ನಗರದಲ್ಲಿ ಸಹಜ ಜನ ಜೀವನಕ್ಕೆ ಅಡಚಣೆಯಾದರೆ ತಕ್ಷಣವೆ ಪೊಲೀಸ್ ನಿಯಂತ್ರಣ ಕೊಠಡಿ ಅಥವಾ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದ್ದಾರೆ.
ಶಂಕರ ಬಿದರಿ ಪರಿಶೀಲನೆ: ನಗರದಲ್ಲಿ ಕೈಗೊಳ್ಳಲಾಗಿರುವ ಭದ್ರತೆಯನ್ನು ಖುದ್ದು ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ, ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿಬ್ಬಂದಿಗೆ ಸೂಚಿಸಿದರು.












Click it and Unblock the Notifications