ಮೊದಲ ವಿಮಾನ ಮೈಸೂರಿಗೆ ಬಂದಿಳಿಯಿತು

ಬೆಂಗಳೂರು, ಅ. 1 : ಮೈಸೂರು ದಸರಾ ಉತ್ಸವದ ಅಂಗವಾಗಿ ಕಿಂಗ್ ಫಿಷರ್ ವಿಮಾನ ಸಂಸ್ಥೆ ಪ್ರಥಮ ಬಾರಿಗೆ ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಆರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಕಿಂಗ್ ಫಿಷರ್ ವಿಮಾನ ಸಂಚಾರಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.ಮೊದಲ ವಿಮಾನ ಇಂದು ಮಧ್ಯಾಹ್ನ 12 ಗಂಟೆಗೆ ಮೈಸೂರಿಗೆ ಬಂದಿಳಿಯಿತು.

ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಆರಂಭಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಬೆಂಗಳೂರು-ಮೈಸೂರು ನಡುವೆ ವಿಮಾನ ಸಂಚಾರ ಆರಂಭಿಸಲು ಕಾರಣೀಭೂತರಾದ ವಿಜಯ್ ಮಲ್ಯ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಕಿಂಗ್ ಫಿಷರ್ ವಿಮಾನ ಸಂಚಾರದಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ದೇಶ ವಿದೇಶಗಳಿಂದ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವ ಜನರಿಗೆ ಈ ಸೌಲಭ್ಯ ಇನ್ನಷ್ಟು ಖುಷಿ ನೀಡಲಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸಂಚರಿಸಿದ ಬೆಂಗಳೂರು-ಮೈಸೂರು ಕಿಂಗ್ ಫಿಷರ್ ವಿಮಾನದಲ್ಲಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸಂಚರಿಸಿದ್ದು ವಿಶೇಷವಾಗಿತ್ತು.

ಮೈಸೂರು ದಸರಾ ದೇಶದ ದೊಡ್ಡ ಉತ್ಸವ. ಇಂತಹ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಅಲ್ಲದೇ ವಿದೇಶಗಳಿಂದಲೂ ಜನರೂ ಆಗಮಿಸುತ್ತಾರೆ. ಹೀಗಾಗಿ ಕಿಂಗ್ ಫಿಷರ್ ವಿಮಾನ ಸಂಚಾರ ಆರಂಭಿಸಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ ಎಂದು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಉದ್ಘಾಟನೆ ಸಂದರ್ಭದಲ್ಲಿ ಕಿಂಗ್ ಫಿಷರ್ ಮುಖ್ಯಸ್ಥ ವಿಜಯ್ ಮಲ್ಯ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+