ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಾಮಾಣಿಕತೆಯಿಂದ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ

By * ರೋಹಿಣಿ ಬಳ್ಳಾರಿ
|
Google Oneindia Kannada News

Gandhi Jayanti in Bellary
ಬಳ್ಳಾರಿ, ಅ.2 : ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಮಾತ್ರ ರಾಜ್ಯವನ್ನು ಭಷ್ಟ್ರಾಚಾರದಿಂದ ಮುಕ್ತವಾಗಿಸಲು ಸಾಧ್ಯ ಎಂದು ಪ್ರವಾಸೋದ್ಯಮ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಜಿ. ಜನಾರ್ಧನ ರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಗಾಂಧೀಜಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಗಾಂಧೀಜಿಯವರ ಅಹಿಂಸೆಯ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿತು. ಅವರ ಶ್ರಮ, ತ್ಯಾಗ, ಚಿಂತನೆ, ಆದರ್ಶ, ಕನಸುಗಳನ್ನು ಸಾಕಾರಗೊಳಿಸುವ ದಾರಿಯಲ್ಲಿ ಸಾಗಬೇಕಾಗಿದೆ ಎಂದರು.

ಡಯಟ್ ಕಚೇರಿ ಆವರಣದಲ್ಲಿ ಇರುವ ಗಾಂಧೀಜಿ ಅವರ ಚಿತಾಭಸ್ಮಾಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿದ ಅವರು, ಕೂಡ್ಲಿಗಿಯಲ್ಲಿರುವ ಗಾಂಧೀಜಿಯವರ ಚಿತಾಭಸ್ಮಾ ಸ್ಮಾರಕದ ಅಭಿವೃದ್ಧಿಗಾಗಿ 1.5 ಕೋಟಿ ರುಪಾಯಿ ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಸ್ಥಾಪಿಸಲಾಗುವುದಾಗಿ ಹೇಳಿದರು.

ಆರೋಗ್ಯ ಸಚಿವ ಬಿ. ಶ್ರೀರಾಮುಲು, ಸಂಸದೆ ಜೆ. ಶಾಂತ, ಶಾಸಕ, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ, ಮೇಯರ್ ನೂರ್ ಜಹಾನ್ ಅಲ್ಲಾಭಕಾಷ್, ಉಪಮೇಯರ್ ತೂರ್ಪು ಯಲ್ಲಪ್ಪ, ಬುಡ ಅಧ್ಯಕ್ಷ ಗುರುಲಿಂಗನಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮತ್ತು ಲಕ್ಷಿ ಪವನ್ ಕುಮಾರ್ ಅವರ ಭಜನಾ ಕಾರ್‍ಯಕ್ರಮವನ್ನು ಆಯೋಜಿಸಲಾಗಿತ್ತು. ಮಹಾತ್ಮ ಗಾಂಧೀಜಿ ಚಿತಾಭಸ್ಮ ಸ್ಮಾರಕ ಬಳಿ ಸರ್ವಧರ್ಮ ಪ್ರಾರ್ಥನಾ ಕಾರ್‍ಯಕ್ರಮ ಕೂಡ ಏರ್ಪಾಟಾಗಿತ್ತು.

ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X