ಅಂಗವಿಕಲರ ಅತ್ಯುತ್ತಮ ಸೇವೆಗೆ ರಾಜ್ಯ ಪ್ರಶಸ್ತಿ

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದುಕೊಳ್ಳಬಹುದಾಗಿದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಕೂಡಾಲಭ್ಯವಿದ್ದು (www.welfareofdisabled.kar.nic.in) ಪಡೆದುಕೊಳ್ಳಬಹುದಾಗಿದೆ.
ಸಂಪೂರ್ಣವಾಗಿ ಭರ್ತಿಮಾಡಿದ ಅರ್ಜಿಗಳನ್ನು ಅಕ್ಟೋಬರ್ 25ರ ಒಳಗಾಗಿ ಸಂಬಂಧಿಸಿದ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಸಲ್ಲಿಸಲು ತಿಳಿಸಲಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ.
ಅರ್ಜಿಗಳ ಪರಿಶೀಲನೆಯ ನಂತರ ಸೂಕ್ತ ಶಿಫಾರಸ್ಸಿನೊಂದಿಗೆ ಅರ್ಜಿಗಳನ್ನು ಪ್ರಧಾನ ಕಚೇರಿಗೆ ಸಲ್ಲಿಸಬೇಕಾಗಿರುವುದರಿಂದ ಅರ್ಜಿಗಳನ್ನು ನಿರ್ದೇಶನಾಲಯಕ್ಕೆ ನೇರವಾಗಿ ಸಲ್ಲಿಸಬಾರದೆಂದೂ, ಒಂದು ವೇಳೆ ಹಾಗೇನಾದರೂ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲವೆಂದೂ ಈ ಮೂಲಕ ತಿಳಿಸಲಾಗಿದೆ.












Click it and Unblock the Notifications