ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಗವಿಕಲರ ಅತ್ಯುತ್ತಮ ಸೇವೆಗೆ ರಾಜ್ಯ ಪ್ರಶಸ್ತಿ

By Rajendra
|
Google Oneindia Kannada News

Physically disabled service award 2010
ಬೆಂಗಳೂರು, ಅ.2: ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆ, ವ್ಯಕ್ತಿಗಳನ್ನ್ನು ಪ್ರೋತ್ಸಾಹಿಸಿ ಬೆನ್ನುತಟ್ಟ್ಟಲು ಸರಕಾರ ಉದ್ದೇಶಿಸಿದೆ. ಒಟ್ಟು 8 ಜನ ವ್ಯಕ್ತಿಗಳಿಗೆ, 5 ಸಂಸ್ಥೆಗಳಿಗೆ ಹಾಗೂ 5 ಜನ ವಿಶೇಷ ಶಾಲಾ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮುಂದಾಗಿದೆ. ಡಿಸೆಂಬರ್ 3 ರಂದು ವಿಶ್ವ ಅಂಗವಿಕಲರ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದುಕೊಳ್ಳಬಹುದಾಗಿದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಕೂಡಾಲಭ್ಯವಿದ್ದು (www.welfareofdisabled.kar.nic.in) ಪಡೆದುಕೊಳ್ಳಬಹುದಾಗಿದೆ.

ಸಂಪೂರ್ಣವಾಗಿ ಭರ್ತಿಮಾಡಿದ ಅರ್ಜಿಗಳನ್ನು ಅಕ್ಟೋಬರ್ 25ರ ಒಳಗಾಗಿ ಸಂಬಂಧಿಸಿದ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಸಲ್ಲಿಸಲು ತಿಳಿಸಲಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ.

ಅರ್ಜಿಗಳ ಪರಿಶೀಲನೆಯ ನಂತರ ಸೂಕ್ತ ಶಿಫಾರಸ್ಸಿನೊಂದಿಗೆ ಅರ್ಜಿಗಳನ್ನು ಪ್ರಧಾನ ಕಚೇರಿಗೆ ಸಲ್ಲಿಸಬೇಕಾಗಿರುವುದರಿಂದ ಅರ್ಜಿಗಳನ್ನು ನಿರ್ದೇಶನಾಲಯಕ್ಕೆ ನೇರವಾಗಿ ಸಲ್ಲಿಸಬಾರದೆಂದೂ, ಒಂದು ವೇಳೆ ಹಾಗೇನಾದರೂ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲವೆಂದೂ ಈ ಮೂಲಕ ತಿಳಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X