ಶಂಕರಲಿಂಗೇ ಗೌಡರಿಂದ ಬಿಜೆಪಿ ಮಾನ ಬೀದಿಯಲ್ಲಿ ಹರಾಜು

ಸಂಪುಟದಲ್ಲಿ ಹೊಸದಾಗಿ ಸೇರ್ಪಡಿಯಾಗಿರುವ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ವಹಿಸಿರುವ ಎಸ್ಎ ರಾಮದಾಸ್ ಅವರು ಮೈಸೂರಿನಲ್ಲಿ ಶಂಕರಲಿಂಗೇ ಗೌಡ ಅವರನ್ನು ಭೇಟಿ ಮಾಡಲು ಹೋದಾಗ, ಯಡಿಯೂರಪ್ಪನವರನ್ನು ವಾಚಾಮಗೋಚರವಾಗಿ ನಿಂದಿಸಿದ್ದಾರೆ.
ಶಂಕರಲಿಂಗೇ ಗೌಡ ಅವರು ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆಯಲ್ಲಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಅವರಿಗೆ ಸ್ಥಾನ ನೀಡದೆ ಯಡಿಯೂರಪ್ಪನವರು ಕೆಲ ಹೊಸಬರಿಗೆ ಮಣೆ ಹಾಕಿದ್ದರು. ಇದು ಶಂಕರಲಿಂಗೇಗೌಡರ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಆಕ್ರೋಶ ಇಂದು ಜ್ವಾಲಾಮುಖಿಯಾಗಿ ಉಕ್ಕಿಹರಿದಿದೆ, ಅದೂ ಬೀದಿಯಲ್ಲಿ.
ಎರಡು ನಿಮಿಷ ಶಿಷ್ಟಾಚಾರದ ಮಾತನಾಡಿದ ಗೌಡರು ರಾಮದಾಸ್ ಅವರು ಮನೆಯಲ್ಲೇ ಇದ್ದಾಗ ಬೀದಿಗೆ ಬಂದು ತಮ್ಮ ಎಂದಿನ ವಾಗ್ದಾಳಿ ಶುರು ಹಚ್ಚಿಕೊಂಡರು. ಸರಕಾರದಲ್ಲಿ ಲಂಚಕೋರರಿಗೆ, ಕಳ್ಳರಿಗೆ ಮತ್ತು ಸುಳ್ಳರಿಗೆ ಅವಕಾಶ ನೀಡಲಾಗಿದೆ. ಆದರೆ, ಪ್ರಾಮಾಣಿಕರಿಗೆ ಮತ್ತು ಹಿರಿಯರನ್ನು ಕಡೆಗಣಿಸಲಾಗಿದೆ. ಯಡಿಯೂರಪ್ಪನವರೇ ತಮ್ಮ ತಲೆ ಮೇಲೆ ಚಪ್ಪಡಿ ಕಲ್ಲನ್ನು ಎಳೆದಿದ್ದಾರೆ. ಈ ಬಾರಿ ಮೈಸೂರು ದಸರಾ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಿಲ್ಲ ಎಂದು ಸಾರ್ವಜನಿಕರೆದುರೇ ಸಹಸ್ರನಾಮಾವಳಿ ಪ್ರಾರಂಭಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications