ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಿನ್ನರಿಗೆ ಸ್ಥಾನ ನೀಡಲು ರಾಜೀನಾಮೆ ನೀಡುವೆ : ರಾಮುಲು

By Mrutyunjaya Kalmat
|
Google Oneindia Kannada News

B Sriramulu
ಚೆನ್ನೈ, ಅ. 6 : ಒಂದು ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು ಭಿನ್ನಮತಕ್ಕೆ ಕಾರಣರಾಗಿದ್ದ ಆರೋಗ್ಯ ಮಂತ್ರಿ ಶ್ರೀರಾಮುಲು ಅವರು ಭಿನ್ನರಿಗೆ ಸಂಪುಟದಲ್ಲಿ ಸ್ಥಾನ ನೀಡಲು ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.

ಚೆನ್ನೈ ಏರ್ ಪೋರ್ಟ್ ನಲ್ಲಿರುವ ಭಿನ್ನರ ಮನವೂಲಿಸುವಲ್ಲಿ ವಿಫಲರಾಗಿರುವ ಅವರು, ತೀವ್ರ ನಿರಾಶೆ ವ್ಯಕ್ತಪಡಿಸಿ ಭಿನ್ನರಿಗೆ ಸ್ಥಾನ ನೀಡಲು ಮುಂದೆ ಬಂದಿದ್ದಾರೆ. ಒಟ್ಟಿನಲ್ಲಿ ಸರಕಾರ ಉಳಿಯಬೇಕು. ಉಳಿದ ಎರಡೂವರೆ ವರ್ಷಗಳ ಕಾಲ ಸರಕಾರವನ್ನು ಪೂರ್ಣಗೊಳಿಸಬೇಕು ಎನ್ನುವುದು ನನ್ನ ಅಶಯ. ಹೀಗಾಗಿ ಸಚಿವ ಸ್ಥಾನ ನೀಡಲು ಮುಂದಾಗಿರುವುದಾಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ್ದಾರೆ.

ಬೋಪಯ್ಯ ವಿರುದ್ಧ ಅವಿಶ್ವಾಸ : ಸದನದ ವಿಶ್ವಾಸವನ್ನು ಕಳೆದುಕೊಂಡಿರುವ ಸ್ಪೀಕರ್ ಕೆಜಿ ಬೋಪಯ್ಯ ಅವರನ್ನು ಅಮಾನತುಗೊಳಿಸುವಂತೆ ಜೆಡಿಎಸ್ ಆಗ್ರಹಿಸಿದೆ. ಅ.12 ರಂದು ಸರಕಾರದ ಬಹುಮತ ತೋರಿಸಲು ರಾಜ್ಯಪಾಲರು ಮುಖ್ಯಮಂತ್ರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಬಹುಮತ ಕಾರ್ಯಕ್ರಮ ಪಾರದರ್ಶಕವಾಗಿ ನಡೆಯಬೇಕಿದ್ದು, ಹೀಗಾಗಿ ಬೋಪಯ್ಯ ಅವರನ್ನು ಅಮಾನತುಗೊಳಿಸಬೇಕು ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ.

ಸಿಎಂ ನಿವಾಸದಲ್ಲಿ ಸಭೆ : ಪಕ್ಷದಲ್ಲಿ ನಡೆದಿರುವ ಭಿನ್ನಮತದಿಂದಾಗಿ ಮುಖ್ಯಮಂತ್ರಿಗಳಿಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಯ ನೇತೃತ್ವ ವಹಿಸಿದ್ದು, ಸಂಸದ ಅನಂತಕುಮಾರ್, ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಉಪಸ್ಥಿತರಿದ್ದರು.

ಇಂದಿನ ಪ್ರಮುಖ ಬೆಳವಣಿಗೆಗಳು
* ಚೆನ್ನೈನಲ್ಲಿ ರಾಜ್ಯ ರಾಜಕೀಯ ಹಣೆಬರಹ ಬರೆದ ರೇಣುಕಾ
* ವಿಧಾನಸಭೆ ವಿಸರ್ಜನೆಗೆ ಆರೆಸ್ಸೆಸ್ ಗ್ರೀನ್ ಸಿಗ್ನಲ್
* ಜೆಡಿಎಸ್ ಜನ್ಮ ಜಾಲಾಡಿದ ಯಡಿಯೂರಪ್ಪ
* ಮತ್ತೆ ಆಪರೇಷನ್ ಕಮಲ : 10 ಕೈಗಳಿಗೆ ಗಾಳ?

ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X