ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷೇತರ ಸಚಿವರು ಸಂಪುಟದಿಂದ ಡಿಸ್ ಮಿಸ್

By Mrutyunjaya Kalmat
|
Google Oneindia Kannada News

Chief Minister BS Yeddyurappa
ಬೆಂಗಳೂರು, ಅ. 6 : ಸರಕಾರ ಪತನಗೊಳ್ಳುವ ಸಾಧ್ಯತೆಯನ್ನು ಅರಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಿನ್ನಮತದ ಹೊಗೆಯೆಬ್ಬಿಸಿರುವ ಪಕ್ಷೇತರ ಶಾಸಕರನ್ನು ಸಂಪುಟದಿಂದ ವಜಾಗೊಳಿಸಲು ಮುಂದಾಗಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ಪತ್ರ ನೀಡಲು ಅವರು ನಿರ್ಧರಿಸಿದ್ದಾರೆ. ಇದರ ಜೊತೆಗೆ ನಾಳೆ 9 ಗಂಟೆಗೆ ಬೆಳಗ್ಗೆ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಇಂದು 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಬಹಿರಂಗಗೊಳಿಸುವುದಾಗಿ ಹೇಳಿದ್ದಾರೆ. ಪಕ್ಷೇತರರನ್ನು ಕೈಬಿಟ್ಟು ಪಕ್ಷದ ಹಿರಿಯರಿಗೆ ಹಾಗೂ ಹೊಸಬರಿಗೆ ಸಚಿವ ಸ್ಥಾನ ನೀಡುವ ಕೊನೆಯ ಕಸರತ್ತನ್ನು ಯಡಿಯೂರಪ್ಪ ನಡೆಸಿದ್ದಾರೆ. ನರೇಂದ್ರ ಸ್ವಾಮಿ, ಡಿ ಸುಧಾಕರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ಹಾಗೂ ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇನ್ನೊಂದು ಬಾಂಬ್ ಹಾಕಿರುವ ಯಡಿಯೂರಪ್ಪ, ಭಿನ್ನಮತ ನಡೆಸಲು ಕೆಲವರು ಶಾಸಕರಿಗೆ 20 ಕೋಟಿ ರುಪಾಯಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ನಿರ್ಧಾರಕ್ಕೆ ಪ್ರತಿಯಾಗಿ ಪಕ್ಷೇತರ ಸಚಿವರು ತಮ್ಮಲ್ಲಿದ್ದ ಸರಕಾರಿ ಕಾರನ್ನು ವಾಪಸ್ ನೀಡಿದ್ದಾರೆ. ಜೊತೆಗೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಲು ತಯಾರಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಭೆಗೆ ಮಾಧ್ಯಮಗಳಿಗೆ ಪ್ರವೇಶ ನೀಡಿಲ್ಲ ಎನ್ನುವುದು ವಿಶೇಷ.

ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X