ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ತೀರ್ಪು ತಿರಸ್ಕರಿಸಿದ ಮುಸ್ಲಿಂ ಸಂಘಟನೆ

By Mahesh
|
Google Oneindia Kannada News

Muslim body rejects HC verdict on Ayodhya
ನವದೆಹಲಿ ಅ 8 : ಬಾಬ್ರಿ ಮಸೀದಿ ವಿವಾದ ಕುರಿತಂತೆ ಅಲಹಾಬಾದ್ ಕೋರ್ಟ್ ನೀಡಿದ ತೀರ್ಪನ್ನು ನಾವು ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಬಾಬ್ರಿ ಮಸೀದಿ ಧ್ವಂಸದಿಂದ ಇಂದಿನವರೆಗೆ ನಡೆದ ಎಲ್ಲಾ ಮುಸ್ಲಿಂ ವಿರೋಧಿ ಧೋರಣೆಗಳಿಗೆ ಕಾಂಗ್ರೆಸ್ ಪಕ್ಷ ಹೊಣೆ. ರಾಜೀ ಸಂಧಾನ ನಡೆಸ ಬೇಕೆನ್ನುವ ತೀರ್ಪಿಗೆ ನಾವು ಒಪ್ಪುವುದಿಲ್ಲ ಎಂದು ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್ ಮೌಲಾನ ಅಹಮದ್ ಬುಖಾರಿ ಹೇಳಿಕೆ ನೀಡಿದ್ದಾರೆ.

ಬುಖಾರಿ ನೇತೃತ್ವದಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ. ದೆಹಲಿ ಮತ್ತು ಉತ್ತರಪ್ರದೇಶದ ಧಾರ್ಮಿಕ ಮುಖಂಡರು ಮತ್ತು ವಿದ್ವಾಂಸರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ತನ್ನ ನಿಲುವನ್ನು ಸ್ಪಷ್ಟ ಪಡಿಸಲಿ. ಪ್ರಧಾನಮಂತ್ರಿ ಭೇಟಿಯ ಅವಕಾಶಕ್ಕಾಗಿ ಪತ್ರ ಬರೆದಿದ್ದೇವೆ. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ ಮೋಸ ಮಾಡುತ್ತಿದೆ ಎಂದು ಬುಖಾರಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂ ಸಂಘಟನೆಗಳನ್ನು ಬೆಂಬಲಿಸುವ ಎಲ್ಲಾ ಪಕ್ಷಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಭೇಟಿಯಾಗಿದ್ದನ್ನು ಸಮರ್ಥಿಸಿಕೊಂಡ ಬುಖಾರಿ, ವಿವಾದಿತ ಸ್ಥಳದಲ್ಲಿ ಮಸೀದಿಯನ್ನು ಹೊರತು ಪಡಿಸಿದ ಯಾವುದೇ ಪರಿಹಾರ ಸಾಧ್ಯವಿಲ್ಲ ಎನ್ನುವುದಾದರೆ ರಾಜೀ ಸಂಧಾನ ಯಾಕೆ ನಡೆಸಬೇಕೆಂದು ಸಭೆಯ ನಂತರ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X