ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಶಾಸಕರ ದಿಲ್ಲಿ ಚಲೋ ಪರೇಡ್

By Mahesh
|
Google Oneindia Kannada News

Karnataka BJP MLAs Delhi Chalo parade
ಬೆಂಗಳೂರು, ಅ.12: ಗಲಾಟೆ, ಗದ್ದಲದ ನಡುವೆ ಬಲಾಬಲ ಪರೀಕ್ಷೆಯಲ್ಲಿ ಧ್ವನಿಮತದ ಮೂಲಕ ಗೆಲುವು ಸಾಧಿಸಿದ ಸಿಎಂ ಯಡಿಯೂರಪ್ಪ ಅವರು, ಸದನದಿಂದ ನೇರ ರೆಸಾರ್ಟ್ ಗೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ. ಇಂದು ತಮ್ಮ 105 ಶಾಸಕರ ನಿಯೋಗದೊಂದಿಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಲು ದಿಲ್ಲಿ ಚಲೋ ಪರೇಡ್ ಹಮ್ಮಿಕೊಂಡಿದ್ದಾರೆ. ಶಾಸಕರ ನಿಯೋಗವನ್ನು ನಿತಿನ್ ಗಡ್ಕರಿ ಹಾಗೂ ಸುಷ್ಮಾ ಸ್ವರಾಜ್ ಸೇರಿಕೊಳ್ಳಲಿದ್ದಾರೆ.

ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರು ಮಾಡಿರುವ ಮನವಿಯನ್ನು ಪುರಸ್ಕರಿಸದಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ, ಬಿಜೆಪಿ ಶಾಸಕರ ಬಲಾಬಲದ ಪ್ರದರ್ಶನ ಮಾಡಲಾಗುವುದು. ವಿಶ್ವಾಸಮತ ಗಳಿಸಿದ ನಂತರವೂ ರಾಷ್ಟ್ರಪತಿ ಆಡಳಿತ ಹೇರುವುದು ಸರಿಯಲ್ಲ ಎಂದು ದೆಹಲಿ ವಿಮಾನವೇರುವ ಮುನ್ನ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಸುದ್ದಿಗಾರರಿಗೆ ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಶಿವರಾಜ್ ಚೌಹಾಣ್, ರಮಣ್ ಸಿಂಗ್ ಮುಂತಾದವರು ತಮ್ಮ ನಿಯೋಗವನ್ನು ಸೇರಲಿದ್ದಾರೆ. ರಾಜ್ಯಪಾಲರು ಕಾಂಗ್ರೆಸ್ ನ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಇಂದು ಮಧ್ಯಾಹ್ನ ಅಡ್ವಾಣಿ ಅವರ ನಿವಾಸದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಗೃಹ ಸಚಿವ ಪಿ ಚಿದಂಬರಂ ಅವರ ಜೊತೆ ಮಾತುಕತೆ ನಡೆಸಲು ಸಮಯವನ್ನು ಕೋರಲಾಗಿದೆ ಎಂದು ಬಿಜೆಪಿಯ ಹಿರಿಯ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X