ರಾಷ್ಟ್ರಪತಿ ಆಳ್ವಿಕೆ ಬಂದರೆ ಉಗ್ರ ಹೋರಾಟ

ರಾಜ್ಯಪಾಲರ ವಿರುದ್ಧ ಕತ್ತಿಮಸೆಯುತ್ತಿರುವ ಬಿಜೆಪಿ ಯುವ ಕಾರ್ಯಕರ್ತರನ್ನು ಸಮಾಧಾನಗೊಳಿಸಿರುವ ರಾಜ್ಯ ಗೃಹಸಚಿವ ಆರ್ ಅಶೋಕ್, ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಬರುವ ತನಕ ಸುಮ್ಮನಿರುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡರೆ, ರಾಜ್ಯವ್ಯಾಪಿ ಹೋರಟವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಭಾರಧ್ವಾಜ್ ವಿರುದ್ಧ ಕರ್ನಾಟಕದ ಎಲ್ಲಾ ಬಿಜೆಪಿ ಘಟಕದವರು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿರುವ ಕ್ರಮವನ್ನು ಖಂಡಿಸಿ, ಕಪ್ಪುಬಾವುಟ ಪ್ರದರ್ಶಿಸಲು ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS











Click it and Unblock the Notifications