ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಶಾಸಕರಿಗೆ ಮತದಾನದ ಹಕ್ಕು ನೀಡಿ : ಎಚ್ಡಿಕೆ

By Mahesh
|
Google Oneindia Kannada News

HD Kumaraswamy
ಬೆಂಗಳೂರು, ಅ.13: ಎರಡನೇ ಬಾರಿ ಬಹುಮತ ಸಾಬೀತುಪಡಿಸುವ ಆತ್ಮವಿಶ್ವಾಸದಲ್ಲಿ ಯಡಿಯೂರಪ್ಪ ಅವರು ಬೀಗುತ್ತಿದ್ದಾರೆ. ಆದರೆ, ಬಿಜೆಪಿ ಭಿನ್ನಮತೀಯ ಹಾಗೂ ಪಕ್ಷೇತರರು ಸೇರಿದಂತೆ 16 ಶಾಸಕರ ಅನರ್ಹತೆಯ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದ್ದು, ವಿಶ್ವಾಸಮತ ಯಾಚನೆಗೆ ತಡೆಯಾಜ್ಞೆ ತರಲು ಚಿಂತನೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಬೀಡು ಬಿಟ್ಟಿರುವ ಎಚ್ಡಿಕೆ, ಅ.14ರಂದು ಅವರು ಕಲಾಪದಲ್ಲಿ ಪಾಲ್ಗೊಂಡು, ಮತದಾನ ಮಾಡಲು ಅವಕಾಶವಿದೆಯೇ ಎಂಬುದರ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗುವುದು. ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆಯಾಜ್ಞೆ ತರುವ ಚಿಂತನೆ ನಡೆದಿದೆ ಎಂದರು.

ರಾಜ್ಯಪಾಲರು ಬಿಜೆಪಿ ಸರಕಾರಕ್ಕೆ ಮತ್ತೊಮ್ಮೆ ವಿಶ್ವಾಸಮತ ಯಾಚನೆಗೆ ಅವಕಾಶ ಮಾಡಿಕೊಟ್ಟಿರುವುದು ಸರಿಯಲ್ಲ. ಒಮ್ಮೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ ನಂತರ, ಮತ್ತೆ ವಿಶ್ವಾಸಮತದ ಅಗತ್ಯವಿರಲಿಲ್ಲ. ಈ ಬಗ್ಗೆ ಮರು ಚಿಂತನೆ ಮಾಡುವಂತೆ ಕುಮಾರಸ್ವಾಮಿ ರಾಜ್ಯಪಾಲರನ್ನು ಒತ್ತಾಯಿಸಿದರು.

ಅನರ್ಹ ಶಾಸಕರ ಪ್ರಕರಣದ ಕುರಿತು ನ್ಯಾಯಾಲಯವು ತೀರ್ಪು ಪ್ರಕಟಿಸುವವರೆಗಾದರೂ ಅ.14ರಂದು ಕರೆದಿರುವ ಅಧಿವೇಶನವನ್ನು ಮುಂದೂಡುವಂತೆ ರಾಜ್ಯಪಾಲರನ್ನು ಆಗ್ರಹಿಸಿದ ಕುಮಾರಸ್ವಾಮಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದಿದ್ದಲ್ಲಿ ಅನರ್ಹ ಶಾಸಕರ ಅಧಿಕಾರವನ್ನು ಮೊಟಕುಗೊಳಿಸಿದಂತಾಗುತ್ತದೆ. ಮಧ್ಯಂತರ ಅರ್ಜಿ ಸ್ವೀಕರಿಸಿ, ಕೂಡಲೇ ತೀರ್ಪು ನೀಡಿದರೆ ಒಳ್ಳೆಯದು ಎಂದರು.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X