ವಜ್ಜಲ್, ಅಶ್ವಥ್ ಶಾಸಕ ಸ್ಥಾನಕ್ಕೆ ಕುತ್ತು
ಬೆಂಗಳೂರು,
ಅ. 14 : ಪಕ್ಷ ನೀಡಿದ್ದ ವಿಪ್ ಉಲ್ಲಂಘಿಸುವ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ಬಿಜೆಪಿಯ ಮಾನಪ್ಪ ವಜ್ಜಲ್ ಮತ್ತು ಜೆಡಿಎಸ್ ನ ಎಂಸಿ ಅಶ್ವಥ್ ಅವರ ಸದಸ್ಯತ್ವ ಅನರ್ಹಗೊಳಿಸುವಂತೆ ಸ್ಪೀಕರ್ ಅವರಿಗೆ ಆಯಾ ಪಕ್ಷಗಳ ಮುಖಂಡರು ದೂರು ಸಲ್ಲಿಸಿದ್ದಾರೆ. id="toptextpromo">ವಿಶ್ವಾಸಮತ
ಯಾಚನೆಯಿಂದಾಗಿ ಪಕ್ಷದ ಶಾಸಕರಿಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ವಿಪ್ ನೀಡಿತ್ತು. ಆದರೆ, ಬಿಜೆಪಿಯ ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ಮತ್ತು ಚನ್ನಪಟ್ಟಣದ ಶಾಸಕ ಎಂ ಸಿ ಅಶ್ವಥ್ ಅವರು ವಿಪ್ ನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕ ಮಾನಪ್ಪ ವಜ್ಜಲ್ ವಿರುದ್ಧ ಸಚೇತಕ ಜೀವರಾಜ್ ಅವರು ಸ್ಪೀಕರ್ ಗೆ ಅವರಿಗೆ ದೂರು ನೀಡಿದ್ದು, ಪಕ್ಷ ವಿರೋಧ ಚಟುವಟಿಕೆಯಲ್ಲಿ ತೊಡಗಿದ್ದರಿಂದ ಅವರ ಶಾಸಕ ಸದಸ್ಯತ್ವವನ್ನು ಅನರ್ಹಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಬಿಜೆಪಿ
ಮುಖಂಡರು ನಮ್ಮ ಪಕ್ಷದ ಶಾಸಕರನ್ನು ಖರೀದಿಸುವುದರೊಂದಿಗೆ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಚನ್ನಪಟ್ಟಣದ ಜೆಡಿಎಸ್ ಶಾಸಕ ಎಂ ಸಿ ಅಶ್ವಥ್ ಅವರು ಪಕ್ಷ ನೀಡಿದ್ದ ವಿಪ್ ನ್ನು ಉಲ್ಲಂಘಿಸಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಸಲಾಗಿದ್ದು, ಅವರ ಶಾಸಕ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಹೇಳಿದ್ದಾರೆ.











Click it and Unblock the Notifications