ಮಲ್ಲೇಶ್ವರಂ ಕಾಲ್ ಸೆಂಟರ್ ರಲ್ಲಿ ಬೆಂಕಿ ಆಕಸ್ಮಿಕ

ಮಲ್ಲೇಶ್ವರಂನ 15ನೇ ಕ್ರಾಸ್ ನಲ್ಲಿರುವ ಐಟಿಓ ರಮಾ ಎಂಬ ಕಾಲ್ ಸೆಂಟರ್ 4 ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಕಾಣಿಸಿಕೊಂಡಿದೆ.ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಗಿದೆ. ಘಟನಾಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲವಾಗಿದೆ. ರಜೆ ದಿನವಾಗಿದ್ದರಿಂದ ಕಚೇರಿಯಲ್ಲಿ ಯಾರೂ ಇರಲಿಲ್ಲ. ಆದರೆ, ಕೆಲ ಕಂಪ್ಯೂಟರ್ ಗಳು ಅಗ್ನಿಗೆ ಆಹುತಿಯಾಗಿವೆ ಎನ್ನಲಾಗಿದೆ. ಸದ್ಯದ ವರದಿಯ ಪ್ರಕಾರ ಬೆಂಕಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.












Click it and Unblock the Notifications