ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲ್ಲೇಶ್ವರಂ ಕಾಲ್ ಸೆಂಟರ್ ರಲ್ಲಿ ಬೆಂಕಿ ಆಕಸ್ಮಿಕ

By Mrutyunjaya Kalmat
|
Google Oneindia Kannada News

Bangalore-Karnataka
ಬೆಂಗಳೂರು, ಅ. 16 : ಇಂದಿರಾನಗರದಲ್ಲಿರುವ ಕಾರ್ಲಟನ್ ಕಟ್ಟಡದ ಬೆಂಕಿ ದುರಂತ ಮಾಸುವ ಮುನ್ನವೇ ನಗರದ ಮಲ್ಲೇಶ್ವರಂನಲ್ಲಿರುವ ಕಾಲ್ ಸೆಂಟರ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಆಕಸ್ಮಿಕ ಸಂಭವಿಸಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ದಳದ ಸಿಬ್ಬಂದಿ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಮಲ್ಲೇಶ್ವರಂನ 15ನೇ ಕ್ರಾಸ್ ನಲ್ಲಿರುವ ಐಟಿಓ ರಮಾ ಎಂಬ ಕಾಲ್ ಸೆಂಟರ್ 4 ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಕಾಣಿಸಿಕೊಂಡಿದೆ.ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಗಿದೆ. ಘಟನಾಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲವಾಗಿದೆ. ರಜೆ ದಿನವಾಗಿದ್ದರಿಂದ ಕಚೇರಿಯಲ್ಲಿ ಯಾರೂ ಇರಲಿಲ್ಲ. ಆದರೆ, ಕೆಲ ಕಂಪ್ಯೂಟರ್ ಗಳು ಅಗ್ನಿಗೆ ಆಹುತಿಯಾಗಿವೆ ಎನ್ನಲಾಗಿದೆ. ಸದ್ಯದ ವರದಿಯ ಪ್ರಕಾರ ಬೆಂಕಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X