ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರ್ತೂರು ಪ್ರಕಾಶ್‌, ರಾಜೂಗೌಡ ಸಂಪುಟಕ್ಕೆ?

By Mahesh
|
Google Oneindia Kannada News

Varthur Prakash
ಬೆಂಗಳೂರು ಅ. 19:ಕೆಸರಿನಲ್ಲಿ ಹೂತು ಹೋಗುತ್ತಿದ್ದ ಕಮಲ ಮೇಲಕ್ಕೆದ್ದು ಎರಡನೇ ಬಾರಿ ನಳನಳಿಸುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ ಶಾಸಕ ನರಸಿಂಹ ನಾಯಕ(ರಾಜು ಗೌಡ) ಹಾಗೂ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್‌ರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದರೆ, ಶಾಸಕರ ಅನರ್ಹತೆ ಪ್ರಕರಣದ ತೀರ್ಪು ಅ.20 ರಂದು ಹೊರಬೀಳುವ ಸಾಧ್ಯತೆಯಿದ್ದು, ಅ.22 ರ ನಂತರ ಸಂಪುಟ ವಿಸ್ತರಣೆ ಮಾಡುವ ಸೂಚನೆಯನ್ನು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೂಡ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯಡಿಯೂರಪ್ಪ ಅವರ ಸಂಪುಟದಲ್ಲಿ ಒಟ್ಟು 6 ಸ್ಥಾನಗಳು ತೆರವಾಗಿದ್ದು, ಈ ಪೈಕಿ 2 ಸ್ಥಾನಗಳನ್ನು ಮಾತ್ರ ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆದಿದೆ.

ಪಕ್ಷದ ರಾಷ್ಟ್ರೀಯ ಮುಖಂಡ, ಸಂಸದ ಅನಂತ್ ಕುಮಾರ್ ಕೂಡ ಹೈಕೋರ್ಟ್‌ನ ತೀರ್ಪಿನ ನಂತರ ಸಂಪುಟ ವಿಸ್ತರಣೆ ಕಾರ್ಯಕ್ಕೆ ಮುಂದಾಗಿ ಎಂದು ಸೂಚನೆ ನೀಡಿರುವುದರಿಂದ ಎಲ್ಲವೂ ಹೈಕೋರ್ಟ್ ತೀರ್ಪಿನ ಬಳಿಕ ನಿರ್ಧಾರವಾಗಲಿದೆ. ಇದಲ್ಲದೆ, ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದ್ದು, ಜೆಡಿಎಸ್ ನಿಂದ ಬಿಜೆಪಿಗೆ ಹಾರಿದ ಎಂ.ಸಿ.ಅಶ್ವಥ್ ಗೆ ಉತ್ತಮ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X