ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೆಕ್ಕಿ ಗಿರೀಶ್ ಹತ್ಯೆ ಪ್ರಕರಣ: ತೀರ್ಪು ಕಾಯ್ದಿರಿಸಲಾಗಿದೆ

By Mahesh
|
Google Oneindia Kannada News

Shubha
ಬೆಂಗಳೂರು, ಅ. 19: ಇಂಟೆಲ್ ಟೆಕ್ಕಿ ಗಿರೀಶ್ ಕೊಲೆ ಪ್ರಕರಣ ಪ್ರಮುಖ ಆರೋಪಿ ವಕೀಲೆ ಶುಭಾ ಹಾಗೂ ಇತರ ನಾಲ್ವರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎನ್. ಆನಂದ್ ಹಾಗೂ ನ್ಯಾಯಮೂರ್ತಿ ಎ.ಎಸ್. ಪಚಾಪುರೆ ಅವರಿದ್ದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ. ಬೆಂಗಳೂರಿನ ತ್ವರಿತ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಕೀಲೆ ಶುಭಾ, ಅರುಣ್ ವರ್ಮಾ, ದಿನೇಶ್ ಮತ್ತು ವೆಂಕಟೇಶ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ನಡುವೆ ಕೊಲೆಗೆ ಸಹಾಯಕನಾಗಿದ್ದ ವೆಂಕಟೇಶ್ ಗೆ ನೀಡಿರುವ ಜೀವಾವಧಿ ಶಿಕ್ಷೆಯನ್ನು ಮರಣದಂಡನೆಯಾಗಿ ಪರಿವರ್ತಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡಾ ಪೂರ್ಣಗೊಂಡಿದೆ. ಈ ಹಿಂದೆ ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಕರಣಂ ಶ್ರೀಧರ್‌ರಾವ್ ವಿರುದ್ಧ ಆರೋಪಗಳು ಕೇಳಿ ಬಂದಿದ್ದವು. ಶ್ರೀಧರ್ ರಾವ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗಿತ್ತು. ಜಡ್ಜ್ ಶ್ರೀಧರ್ ಅವರು ಕೇಸ್ ನಿಂದ ಹೊರನಡೆದ ನಂತರ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೆಹರ್ ಅವರು ನ್ಯಾ.ಎ.ಎಸ್ ಆನಂದ್ ಹಾಗೂ ನ್ಯಾ. ಪಚಾಪುರೆ ಆವರಿದ್ದ ಪೀಠಕ್ಕೆ ವರ್ಗಾಯಿಸಿದ್ದರು.

ಕೇಸ್ ಹಿಸ್ಟರಿ: 2003ರ ನವೆಂಬರ್ 30ರಂದು ಕಾನೂನು ವಿದ್ಯಾರ್ಥಿ ಶುಭಾ ಹಾಗೂ ಇಂಟೆಲ್ ಸಾಫ್ಟ ವೇರ್ ಉದ್ಯೋಗಿ ಗಿರೀಶ್ ಅವರ ನಿಶ್ಚಿತಾರ್ಥ ನಡೆದಿತ್ತು. ಡಿ.3 ರಂದು ತಮ್ಮ ಭಾವಿ ಪತಿ ಗಿರೀಶ್‌ರನ್ನು ಆರೋಪಿ ಶುಭಾ ತನ್ನ ಪ್ರಿಯಕರ ಅರುಣ್ ವರ್ಮಾ ಜೊತೆ ಸೇರಿ ಕೊಲೆ ಮಾಡಿದ್ದಳು. ಆರೋಪಿಗಳ ನಡುವೆ ನಡೆದ ಫೋನ್ ಸಂಭಾಷಣೆ ಹಾಗೂ ಎಸ್ ಎಂಎಸ್ ವಿನಿಮಯಗಳನ್ನು ಆಧಾರವಾಗಿಟ್ಟುಕೊಂಡು, ವಿಚಾರಣೆ ನಡೆಸಿದ ಬೆಂಗಳೂರಿನ ತ್ವರಿತ ನ್ಯಾಯಾಲಯ ಜುಲೈನಲ್ಲಿ ನಾಲ್ವರು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X