ಸಿಎಂ ಚೇಂಜಾದ್ರೆ ಬೆಂಬಲ ಕೋಡ್ತೀವಿ...

ರಾಷ್ಟ್ರದ ಗಮನ ಸೆಳೆದಿರುವ ಬಿಜೆಪಿ ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವಿ ಜಿ ಸಭಾಹಿತ್ ಅವರ ಏಕಸದಸ್ಯ ಪೀಠದೆದಿರು ಇಡೀ ದಿನ ವಾದ ಪ್ರತಿವಾದ ನಡೆಯಿತು. ವಿಚಾರಣೆ ಅಪೂರ್ಣಗೊಂಡಿದ್ದು, ನಾಳೆಯೂ ಇದರ ವಿಚಾರಣೆ ನಡೆಯಲಿದೆ.
ನಾವು ಈಗಲೂ ಬಿಜೆಪಿ ಪಕ್ಷದಲ್ಲೇ ಇದ್ದೇವೆ. ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಬಿಜೆಪಿಯಿಂದ ಹೊರಹೋಗಿ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಿಲ್ಲ. ನಮ್ಮ ಅಸಮಾಧಾನವೇನಿದ್ದರೂ ನಾಯಕತ್ವದ ವಿರುದ್ಧ, ಬಿಜೆಪಿಯಲ್ಲಿ ಬೇರೆ ಯಾರೇ ಮುಖ್ಯಮಂತ್ರಿಯಾದರೂ ನಾವು ಬೆಂಬಲ ನೀಡಲು ಸಿದ್ಧ ಎಂದು 11 ಮಂದಿ ಬಿಜೆಪಿ ಅನರ್ಹ ಶಾಸಕರ ಪರ ಕೆಜಿ ರಾಘವನ್ ವಾದ ಮಂಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪೀಕರ್ ಅವರಿಗೆ ಬರೆದಿರುವ ಪತ್ರದಲ್ಲಿ 11 ಮಂದಿ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಉಲ್ಲೇಖಿಸಿಲ್ಲ. ರಾಜ್ಯಪಾಲರಿಗೆ ಪತ್ರ ನೀಡಿರುವ 11 ಮಂದಿ ಶಾಸಕರು ಬೆಂಬಲವನ್ನು ವಾಪಸ್ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ಅವರನ್ನು ಸಿಎಂ ಅವರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ ಗೆ ಮನವಿ ಮಾಡಿಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಉಲ್ಲೇಖಿಸಿಲ್ಲ. ಇದರಿಂದಾಗಿ ಸ್ಪೀಕರ್ ಅವರು ಅದೇಶಿಸಿರುವಂತೆ ಪಕ್ಷಾಂತರ ಕಾಯ್ದೆ ಶೆಡ್ಯುಲ್ 10 ಅನುಚ್ಛೇದ ಕಲಂ 2(1) ಎ ಅಡಿ ಶಾಸಕರನ್ನು ಅನರ್ಹಗೊಳಿಸಲು ಬರುವುದಿಲ್ಲ ಎಂದು ರಾಘವನ್ ವಾದಿಸಿದರು.
ಏಕಸದಸ್ಯ ಪೀಠಕ್ಕೆ ವರ್ಗಾವಣೆ : ಪಕ್ಷವಿರೋಧಿ ಚಟುವಟಿಕೆಯಾಗಿ 11 ಬಿಜೆಪಿ ಶಾಸಕರನ್ನು ವಿಧಾನಸಭೆ ಸಭಾಧ್ಯಕ್ಷ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಹೂಡಲಾಗಿದ್ದ ರಿಟ್ ಅರ್ಜಿಯಲ್ಲಿ ತೀರ್ಪು ನೀಡಿದ್ದ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಮತ್ತು ನ್ಯಾ. ಎನ್ ಕುಮಾರ್ ಅವರು ವಿಭಿನ್ನ ತೀರ್ಪು ನೀಡಿದ್ದರು.
ವಿಧಾನಸಭಾಧ್ಯಕ್ಷ ಕೆಜಿ ಬೋಪಯ್ಯ ಅವರು ಶಾಸಕರನ್ನು ಅನರ್ಹಗೊಳಿಸಿದ್ದನ್ನು ಮುಖ್ಯ ನ್ಯಾಯಮೂರ್ತಿ ಖೇಹರ್ ಎತ್ತಿಹಿಡಿದಿದ್ದರೆ, ಗುಲಬರ್ಗಾದ ಸರ್ಕಿಟ್ ಬೆಂಚಿಗೆ ವರ್ಗಾವಣೆಗೊಂಡಿರುವ ನ್ಯಾ. ಕುಮಾರ್ ಅವರು ಸಭಾಧ್ಯಕ್ಷ ಅವರ ಕ್ರಮ ತಪ್ಪು ಎಂದು ತೀರ್ಪನ್ನು ನೀಡಿದ್ದರು. ಈ ಕಾರಣದಿಂದಾಗಿ ಪ್ರಕರಣವನ್ನು ಮೂರನೇ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿತ್ತು.
ಈ ಪ್ರಕರಣದಲ್ಲಿ ನಾಲ್ಕು ವಿಷಯಗಳನ್ನು ಚರ್ಚಿಸಲಾಗಿತ್ತು. ಅವು, ಸ್ವಾಭಾವಿಕ ನ್ಯಾಯ ಉಲ್ಲಂಘಿಸಲಾಗಿದೆಯೇ ಇಲ್ಲವೆ? ನಿಯಮ ಗಾಳಿಗೆ ತೂರಲಾಗಿದೆಯೇ ಇಲ್ಲವೆ? ಸಭಾಧ್ಯಕ್ಷ ನಿರ್ಣಯ ದುರುದ್ದೇಶದಿಂದ ಕೂಡಿದೆಯೆ ಇಲ್ಲವೆ? ಮತ್ತು ಭಿನ್ನಮತೀಯರು ಸ್ವಇಚ್ಛೆಯಿಂದ ಬಿಜೆಪಿ ಪಕ್ಷ ಬಿಟ್ಟು ಹೊರಹೋಗಿದ್ದಾರೆಯೆ ಇಲ್ಲವೆ? ಇವುಗಳಲ್ಲಿ ಮೊದಲ ಮೂರು ವಿಷಯಗಳಲ್ಲಿ ಇಬ್ಬರೂ ನ್ಯಾಯಮೂರ್ತಿಗಳು ಒಮ್ಮತ ಹೊಂದಿದ್ದರೆ, ನಾಲ್ಕನೇ ವಿಷಯದಲ್ಲಿ ಭಿನ್ನಮತ ಹೊಂದಿದ್ದರು. ಪ್ರಕರಣವನ್ನು ಮೂರನೇ ನ್ಯಾಯಮೂರ್ತಿಗೆ ವರ್ಗಾಯಿಸಿ ಅಕ್ಟೋಬರ್ 20ರಂದು ವಿಚಾರಣೆ ಮುಂದೂಡಲಾಗಿತ್ತು.
ಅನರ್ಹ ಶಾಸಕರ ಸುದ್ದಿಗೋಷ್ಠಿ : ನಮ್ಮನ್ನು ಯಾರೂ ಗೃಹಬಂಧನದಲ್ಲಿ ಇಟ್ಟಿಲ್ಲ. ಯಾರಿಗೂ ಹೆದರುವ ಜಾಯಮಾನ ನಮ್ಮದಲ್ಲ. ನಮ್ಮ ಬೇಡಿಕೆ ಒಂದೇ - ಮುಖ್ಯಮಂತ್ರಿಗಳನ್ನು ಬದಲಾಯಿಸಬೇಕು. ಮುಖ್ಯಮಂತ್ರಿಗಳನ್ನು ಬದಲಾಯಿಸಿದರೆ, ಬಿಜೆಪಿ ಬೆಂಬಲ ಕೊಡುತ್ತೇವೆ. ಬಿಜೆಪಿ ಹೈಕಮಾಂಡ್ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಅತೃಪ್ತರ ನಾಯಕ್ತವ ವಹಿಸಿರುವ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ತೀರ್ಪು ಹೊರಬರುವವರೆಗೂ ನಾವು ರೆಸಾರ್ಟ್ ನಲ್ಲಿ ಇರುತ್ತೇವೆ. ಕಾನೂನು ಸಮರವನ್ನು ಮುಂದುವರೆಸುತ್ತೇವೆ. ನಮ್ಮ ವಿರುದ್ಧ ತೀರ್ಪು ಬಂದರೆ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಆಗಲೇಬೇಕು ಎಂದು ಜಾರಕಿಹೊಳಿ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications