ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

8,000 ಶಿಕ್ಷಕರ ನೇಮಕಾತಿ : ಕಾಗೇರಿ

By Mrutyunjaya Kalmat
|
Google Oneindia Kannada News

Vishweshwar Hegde Kageri
ಬೆಂಗಳೂರು, ಅ. 20 : ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಾರ್ಚ್ ತಿಂಗಳೊಳಗೆ 8,000 ಮಂದಿ ಶಿಕ್ಷಕರು ನಿವತ್ತರಾಗಲಿದ್ದು, ಈ ಸ್ಥಾನಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಹಾಗೆಯೇ ಇಂಗ್ಲಿಷ್ ಹಾಗೂ ವಿಜ್ಞಾನ ವಿಷಯದಲ್ಲಿ ಪ್ರಬುದ್ಧತೆ ಪಡೆದ ಶಿಕ್ಷಕರಿಗೆ ಆದ್ಯತೆ ನೀಡಲಾಗುವುದೆಂದು ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕೆಂಬ ನಿಟ್ಟಿನಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಗುಣಮಟ್ಟದ ಶಿಕ್ಷಣದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಸರಕಾರದ ಹಣಕಾಸು ಇಲಾಖೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಶಿಕ್ಷಕರನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಂದು ಹಣಕಾಸು ಇಲಾಖೆಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. 8000 ಮಂದಿ ನಿವತ್ತಿಯಾಗುತ್ತಿದ್ದಂತೆಯೇ ಅವರ ಸ್ಥಾನಗಳನ್ನು ತುಂಬುವ ವೇಳೆ ಇಂಗ್ಲಿಷ್ ಹಾಗೂ ವಿಜ್ಞಾನ ವಿಷಯದಲ್ಲಿ ಪಳಗಿರುವ ಶಿಕ್ಷಕರನ್ನೇ ನೇಮಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X