ನಂದಿಬೆಟ್ಟ ಅಭಿವೃದ್ಧಿಗೆ 15 ಕೋಟಿ ರು
ಬೆಂಗಳೂರು,
ಅ. 21 : ಪ್ರಸಿದ್ದ ಗಿರಿಧಾಮಗಳಾದ ಚಿಕ್ಕಮಗಳೂರು ಜಿಲ್ಲೆ ಕೆಮ್ಮಣ್ಣಗುಂಡಿ ಹಾಗೂ ಚಿಕ್ಕಾಬಳ್ಳಾಪುರ ಜಿಲ್ಲೆಯ ನಂದಿಬೆಟ್ಟಗಳನ್ನು 31 ಕೋಟಿ ರುಪಾಯಿಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. id="toptextpromo">ಈ
ಪೈಕಿ ಕೆಮ್ಮಣ್ಣಗುಂಡಿಗೆ 16 ಕೋಟಿ ರುಪಾಯಿ, ನಂದಿ ಬೆಟ್ಟಕ್ಕೆ 15 ಕೋಟಿ ರುಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದ್ದು, ಮುಂಬರುವ ಮಳೆಗಾಲದ ಒಳಗಾಗಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. ಈ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಪ್ರವಾಸಿಗರಿಗೆ ಬೇಕಿರುವ ಎಲ್ಲ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಸಿಎಂ ಹೇಳಿದರು. id='are-slot-1' class='oiad oi-axt oiadv'> id='top-searched-articles'>ನಂದಿ
ಬೆಟ್ಟದಲ್ಲಿ ವಾಹನ ನಿಲುಗಡೆ ವ್ಯವಸ್ಥೆ, ಧೂಮರಹಿತ ವಾಹನಗಳ ವ್ಯವಸ್ಥೆ, ಪೊಲೀಸ್ ಚೌಕಿ ಸ್ಥಾಪಿಸುವ ಮೂಲಕ ಮಾದರಿ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು ಎಂದು ತಿಳಿಸಿದರು. ಕೆಮ್ಮಣ್ಣ ಗುಂಡಿಗೆ ಸಂಪರ್ಕ ಕಲ್ಪಿಸುವ ಲಿಂಗದಹಳ್ಳಿಯಿಂದ ಕೆಮ್ಮಣ್ಣಗುಂಡಿವರೆಗಿನ 16 ಕಿಮೀ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಸದ್ಯಕ್ಕೆ 7 ಕಿಮೀ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುವುದು ಎಂದು ಹೇಳಿದರು.











Click it and Unblock the Notifications