ಶ್ರೀರಾಮಸೇನೆ ದತ್ತಮಾಲಾ ಅಭಿಯಾನ ಸಂಪನ್ನ

ನಾಡಿನ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತಾದಿಗಳಿಗೆ ಅ.18 ರಂದು ದತ್ತಮಾಲೆ ಧಾರಣೆ ಕಾರ್ಯವಾಗಿತ್ತು. ಇಂದು ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಬೋಳರಾಮೇಶ್ವರ ದೇವಸ್ಥಾನದಿಂದ ಹೊರಟ ಸುಮಾರು 2 ಸಾವಿರಕ್ಕೂ ಅಧಿಕ ದತ್ತಮಾಲಾಧಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಿ ಇನಾಂ ದತ್ತಾತ್ರೇಯ ಪೀಠವನ್ನು ತಲುಪಿದರು.
ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಸುಳ್ಯ, ಪುತ್ತೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರನ್ನು ಬ್ರಹ್ಮಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಹಾಗೂ ಪ್ರಮೋದ್ ಮುತಾಲಿಕ್ ಮುನ್ನೆಡೆಸಿದರು.
ಮಳೆ ನಡುವೆ ತಾತ್ಕಾಲಿಕ ಶೆಡ್ ಗಳಲ್ಲಿ ಪೂಜೆ ನಡೆಸುತ್ತಿದ್ದ ಸಂದರ್ಭದಲ್ಲಿ ಶೆಡ್ ನ ಷೀಟ್ ಗಳು ಹಾರುಹೋಗಿ ಗೊಂದಲ ಉಂಟಾಗಿತ್ತು. ಆದಎರ್, ಪೂಜೆ, ಹೋಮ, ಹವನಾದಿಗಳು ಸಾಂಗವಾಗಿ ನಡೆದು, ನೆರೆದಿದ್ದ ಭಕ್ತ ಸಮೂಹಕ್ಕೆ ಸಂತೃಪ್ತಿಯಿಂದ ಊರುಗಳಿಗೆ ತೆರಳಿದರು.
ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS












Click it and Unblock the Notifications