ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಗದಿತ ಅವಧಿಗೆ ಮದ್ಯದಂಗಡಿ ಓಪನ್ : ರೇಣುಕಾ

By Mrutyunjaya Kalmat
|
Google Oneindia Kannada News

MP Renukacharya
ಬೆಂಗಳೂರು, ಅ. 22 : ನಿಗದಿತ ಅವಧಿಗಿಂತ ಮೊದಲೇ ಮದ್ಯದಂಗಡಿಗಳನ್ನು ತೆರೆಯುವವರ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಮದ್ಯದಂಗಡಿ ತೆರೆಯಬೇಕೆಂಬ ನಿಯಮವಿದೆ. ಆದರೆ, ಕೆಲವು ಕಡೆ ಬೆಳಗ್ಗೆ 6 ಗಂಟೆಗೇ ತೆರೆಯುತ್ತಿರುವ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ.

ಬೆಳಗ್ಗೆ 10 ಗಂಟೆಗೂ ಮುನ್ನ ಬಾರ್, ಮದ್ಯದಂಗಡಿ ತೆರೆಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುದು. ಈ ಸಂಬಂಧ ಸ್ಥಳೀಯ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಾಟಲಿಗಳ ಮೇಲೆ ನಮೂದಿಸಿರುವ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಇದನ್ನು ತಡೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 541 ಕಳ್ಳಬಟ್ಟಿ ಕೇಂದ್ರಗಳನ್ನು ಗುರುತಿಸಲಾಗಿದೆ. ಇದರಲ್ಲಿ 219 ಕೇಂದ್ರಗಳನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗಿದೆ. ಉಳಿದ ಕಡೆಯೂ ಕಾರ್ಯಾಚರಣೆ ನಡೆಯುತ್ತಿದ್ದು, ಈ ದಂಧೆ ಇಲ್ಲದಂತೆ ಮಾಡಲಾಗುವುದು ಎಂದರು. ಅಬಕಾರಿ ತೆರಿಗೆ ಸಂಗ್ರಹ ಗುರಿಯಾಗಿ 7,000 ಕೋಟಿ ರೂ. ನಿಗದಿಪಡಿಸಲಾಗಿದೆ.

ಆರು ತಿಂಗಳಲ್ಲಿ 4,078 ಕೋಟಿ ರೂ. ಸಂಗ್ರಹ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 596 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಿದೆ ಎಂದು ಹೇಳಿದರು. ಗೋವಾದಿಂದ ಅಕ್ರಮವಾಗಿ ಸ್ಪಿರಿಟ್ ಸಾಗಣೆ ಮಾಡಲು ನೆರವಾದ ಆರೋಪದ ಮೇಲೆ ಹುಬ್ಬಳಿ ಕಚೇರಿಯ ಮೂವರು ಅಬಕಾರಿ ಗಾಡ್ ಗಳನ್ನು ಅಮಾನತುಪಡಿಸುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X