ಇನ್ಫೋಸಿಸ್ : 12 ಸಾವಿರ ಉದ್ಯೋಗಿಗಳಿಗೆ ಬಡ್ತಿ
ಹೈದರಾಬಾದ್,
ಅ. 22 : ವಿಪುಲ ಅವಕಾಶಗಳಿಗೆ ತೆರೆದುಕೊಂಡಿರುವ ಸಾಫ್ಟ್ ವೇರ್ ಕ್ಷೇತ್ರದಲ್ಲಿ ನುರಿತ ಉದ್ಯೋಗಿಗಳ ಸಮಸ್ಯೆ ಎದುರಾಗಿದೆ. ಹೀಗಾಗಿ ಸಾಫ್ಟ್ ವೇರ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಬಡ್ತಿ ನೀಡುವ ಮೂಲಕ ಹಿಡಿದಿಟ್ಟುಕೊಳ್ಳುವ ಸಾಹಸಕ್ಕೆ ಕೈಹಾಕಿದೆ. ಈ ನಿಟ್ಟಿನಲ್ಲಿ ಇನ್ಫೋಸಿಸ್ ಕಂಪನಿ ತನ್ನ 12 ಸಾವಿರ ಉದ್ಯೋಗಿಗಳಿಗೆ ಬಡ್ತಿ ನೀಡಲು ಮುಂದಾಗಿದೆ. id="toptextpromo">ಕಳೆದ
ಏಪ್ರಿಲ್ ನಲ್ಲಿ ಬಡ್ತಿ ಮತ್ತು ಸಂಬಳ ಹೆಚ್ಚಳ ಮಾಡಲಾಗಿದೆ. ನುರಿತ ಉದ್ಯೋಗಿಗಳನ್ನು ಕಂಪನಿಯಲ್ಲಿ ಉಳಿಸಿಕೊಳ್ಳುವುದರ ಸಲುವಾಗಿ ಅಕ್ಟೋಬರ್ ಕೊನೆಯ ವಾರದಲ್ಲಿ ಕಂಪನಿಯ 12 ಸಾವಿರ ಉದ್ಯೋಗಿಗಳಿಗೆ ಬಡ್ತಿ ನೀಡಲು ತಿರ್ಮಾನಿಸಲಾಗಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಕ್ರಿಸ್ ಗೋಪಾಲಕೃಷ್ಣ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಚೀನಾದಲ್ಲಿಯೂ
ಕೂಡಾ ನೂತನ ಕಂಪನಿ ಆರಂಭಿಸಲಾಗಿದ್ದು, 100 ಮಿಲಿಯನ್ ಡಾಲರ್ ಹಣ ಹೂಡಿಕೆ ಮಾಡಲಾಗಿದೆ. ಸದ್ಯ ಅಲ್ಲಿ 4,000 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಕಂಪನಿಗೆ ಬೇಕಿರುವ ಅಗತ್ಯ ಸೌಕರ್ಯಗಳಿಗಾಗಿ ಚೀನಾ ಸರಕಾರದೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.











Click it and Unblock the Notifications