ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಬಾವುಟಕ್ಕೆ ಬೆಂಕಿ, ಕರವೇ ಪ್ರತಿಭಟನೆ

By Mahesh
|
Google Oneindia Kannada News

Karnataka Rakshana Vedike
ಬೆಳಗಾವಿ, ಅ.22: ಅ.23 ರಿಂದ 25ರ ವರೆಗೆ ನಡೆಯಲಿರುವ ಸಾಂಸ್ಕೃತಿಕ ಕಿತ್ತೂರು ಉತ್ಸವದ ಅಂಗವಾಗಿ ಬೀದಿಗಳಲ್ಲಿ ಹಾಕಿದ್ದ ಕನ್ನಡ ಕಟೌಟ್, ಬ್ಯಾನರ್‌, ಬಾವುಟಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಕುಂದಾ ನಗರದ ಕಡೋಲಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಪ್ರತಿಭಟನೆ ನಡೆಸಿದೆ.

ಇನ್ಫೋಸಿಸ್ ನ ಸುಧಾಮೂರ್ತಿ, ನಟಿ ಜಯಂತಿ, ಜಯಪ್ರದಾ, ಅನು ಪ್ರಭಾಕರ್, ಹಂಸಲೇಖ ಮುಂತಾದ ಗಣ್ಯರು ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕುಂದಾ ನಗರಿಯಲ್ಲಿ ಅಕ್ಟೋಬರ್ 23, 24 ಹಾಗೂ 25ರಂದು ಕಿತ್ತೂರು ಉತ್ಸವಕ್ಕಾಗಿ ಜಿಲ್ಲಾಡಳಿತ ಭರದ ಸಿದ್ದತೆ ನಡೆಸುತ್ತಿದ್ದು, ಇದರ ಅಂಗವಾಗಿ ಕನ್ನಡ ಪರ ಸಂಘಟನೆಗಳು ಕಡೋಲಿ ಗ್ರಾಮದ ಬೀದಿಯಲ್ಲಿ ಕಟೌಟ್, ಬ್ಯಾನರ್ ಕಟ್ಟಿದ್ದವು. ಆದರೆ ದುಷ್ಕರ್ಮಿಗಳು ಶುಕ್ರವಾರ ನಸುಕಿನ ವೇಳೆ ಬೆಂಕಿ ಹಚ್ಚಿರುವುದು ಕಂಡುಬಂದಿತ್ತು.

ಕನ್ನಡ ಬಾವುಟಗಳಿಗೆ ಬೆಂಕಿ ಹಚ್ಚಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಪರ ಸಂಘಟನೆ, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ದೂರು ದಾಖಲಿಸಲಾಗಿಸಿಕೊಂಡಿರುವ ಗ್ರಾಮಾಂತರ ಪೊಲೀಸರು, ದುಷ್ಕರ್ಮಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದಾರೆ.

ರಾಜ್ಯದೆಲ್ಲೆಡೆ ಪ್ರತಿಭಟನೆ: ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಎಂಇಎಸ್ ಧ್ವಜವನ್ನು ಸುಟ್ಟು ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನಲ್ಲಿ ಕರವೇ ಕನ್ನಡ ಕಾವಲು ಪಡೆ ಹಾಗೂ ಹುಬ್ಬಳ್ಳಿ ದಾವಣಗೆರೆಯ ರಕ್ಷಣಾವೇದಿಕೆಯ ಕಾರ್ಯಕರ್ತರು ಕೂಡಾ ಎಂಇಎಸ್ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನೆ ಮಾಡಿದ್ದಾರೆ.

ವಿಡಿಯೋಗಳು: ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X