ಶಾಲಾ, ಕಾಲೇಜುಗಳಲ್ಲಿ ವಾಲ್ಮೀಕಿ ರಾಮಾಯಣ

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದ್ದು ಮುಖ್ಯಮಂತ್ರಿಗಳು ಈ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ವಾಲ್ಮೀಕಿ ರಾಮಾಯಣದ ಪ್ರತಿಗಳು ಪ್ರತಿಯೊಂದು ಶಾಲಾ, ಕಾಲೇಜುಗಳಲ್ಲಿ ಇರುವಂತಾಗಬೇಕು ಎಂದರು.
ಶುಕ್ರವಾರ ಅವರು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸರಕಾರದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ ಸುಮಾರು ರು.5 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಭವನ ನಿರ್ಮಾಣಕ್ಕೆ ಕೂಡಲೆ ಸ್ಥಳ ಗುರುತಿಸಿ, ಶೀಘ್ರದಲ್ಲೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು. ಮುಂದಿನ ವರ್ಷದ ಹೊತ್ತಿಗೆ ಭವನ ನಿರ್ಮಾಣವಾಗಲಿದ್ದು ಇನ್ನು ಮುಂದೆ ಅಲ್ಲೇ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.












Click it and Unblock the Notifications