ಹುಬ್ಬಳ್ಳಿಯಲ್ಲಿ ರೌಡಿಗಳ ಕಾಳಗ, ಇಬ್ಬರಿಗೆ ತೀವ್ರ ಗಾಯ

Hubli crime beat
ಹುಬ್ಬಳ್ಳಿ, ಅ. 23: ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿನ ಅಪ್ಸರ ಚಿತ್ರಮಂದರದಲ್ಲಿ 'ರಕ್ತಚರಿತ್ರ'ಸಿನಿಮಾ ನೋಡಿ ಹೊರಬರುತ್ತಿದ್ದ ಪಾಲಾಕ್ಷನಿಗೆ ರೀಲ್ ನಲ್ಲಿ ಕಂಡ ಮಚ್ಚು, ಲಾಂಗುಗಳು ರಿಯಲ್ಲಾಗಿ ಎದುರಾದಾಗ ದಂಗಾಗಿದ್ದಾನೆ. ಸಿನಿಮೀಯ ರೀತಿಯಲ್ಲಿ ನಡೆದ ರೌಡಿಗಳ ಕಾಳಗದಲ್ಲಿ ಇಬ್ಬರಿಗೆ ತೀವ್ರ ಗಾಯಗೊಂಡ ಘಟನೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗುಂಪೊಂದು ನಗರದಲ್ಲಿ ಹಾಡುಹಗಲೇ ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಜನತೆಯನ್ನು ಬೆಚ್ಚಿಬೀಳಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಂದಿರಾನಗರದ ಪಾಲಾಕ್ಷ ವಲ್ಲೂರು (30) ಹಾಗೂ ಆತನ ಸ್ನೇಹಿತ ಪ್ರದೀಪ್ (34) ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ದುಷ್ಕರ್ಮಿಗಳು ಪಾಲಾಕ್ಷ ವಲ್ಲೂರನ ಹೊಟ್ಟೆಗೆ ಮಾರಕಾಸ್ತ್ರದಿಂದ ಇರಿದಿದ್ದು, ಅದನ್ನು ಹೊಟ್ಟೆಯಲ್ಲಿಯೇ ಬಿಟ್ಟು ಪರಾರಿಯಾಗಿದ್ದರು. ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿ, ಅಂಗಡಿ-ಮುಂಗಟ್ಟುಗಳ ಮಾಲಕರು ಸ್ವಯಂ ಪ್ರೇರಿತ ಬಂದ್ ಮಾಡಿದ್ದರು. ರಜಾದಿನವಾದ್ದರಿಂದ ಅಂಗಡಿಗಳು ಇಂದು ಕೂಡ ಮುಚ್ಚಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆದಿದೆ. ಪ್ರದೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹುಬ್ಬಳ್ಳಿ ಟೌನ್ ಠಾಣಾ ಪೊಲೀಸರು ಮಾಹಿತಿ ನೀಡಿದರು.

ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+