ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡಿಗರಿಗಿದು ಕರಾಳ ದೀಪಾವಳಿ : ದೇವೇಗೌಡ

By Mrutyunjaya Kalmat
|
Google Oneindia Kannada News

ನವದೆಹಲಿ, ಅ. 25 : ಕರ್ನಾಟಕದ ಜನರ ಪಾಲಿಗೆ ಈ ಸಲದ ದೀಪಾವಳಿ ಕರಾಳ ದೀಪಾವಳಿ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ಒಂದು ತಿಂಗಳನಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಜನರು ಅಸಮಾಧಾನಗೊಂಡಿದ್ದಾರೆ ಎಂದರು. ಕರ್ನಾಟಕದಲ್ಲಿರುವ ಬಿಜೆಪಿ ಸರಕಾರ ಜನವಿರೋಧಿಯಾಗಿದೆ. ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯೆಯ ಕೊರತೆಯಿದ್ದರೂ ವಾಮಮಾರ್ಗದ ಮೂಲಕ ಅಧಿಕಾರ ನಡೆಸುತ್ತಿದೆ ಎಂದು ಗೌಡರು ಆರೋಪಿಸಿದರು.

ಸರಕಾರಕ್ಕೆ ಬೇಕಿರುವ ಅಗತ್ಯ ಶಾಸಕರಿಗಾಗಿ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡತೊಡಗಿದೆ. ಆಪರೇಷನ್ ಕಮಲ ಹೆಸರಿನ ಈ ಕೃತ್ಯದ ಮೂಲಕ ಅನ್ಯ ಪಕ್ಷಗಳ ಶಾಸಕರಿಗೆ ಗಾಳ ಹಾಕಲಾಗುತ್ತದೆ. ಒಬ್ಬೊಬ್ಬ ಶಾಸಕರಿಗೂ 50 ಕೋಟಿ ರುಪಾಯಿಗಳ ಆಮಿಷವೊಡ್ಡಲಾಗಿದೆ. ಈ ಮಟ್ಟದ ದೊಡ್ಡ ಹಣವನ್ನು ಬಿಜೆಪಿ ನಾಯಕರು ಎಲ್ಲಿಂದ ತಂದರೂ ಎನ್ನುವುದು ಬಿಜೆಪಿ ಹೈಕಮಾಂಡ್ ವಿವರಿಸಬೇಕು ಎಂದು ದೇವೇಗೌಡ ಒತ್ತಾಯಿಸಿದರು.

ಕಳೆದ ಅ. 11 ರಂದು ಕರ್ನಾಟಕದ ವಿಧಾನಸಭೆಯಲ್ಲಿ ನಡೆದ ಘಟನೆ ನಾಚಿಕೆ ತರಿಸುವಂತಿದೆ. ಪ್ರತಿಪಕ್ಷಗಳಿಗೆ ಮತ ನೀಡಲು ಅವಕಾಶ ನೀಡದೆ ವಿಶ್ವಾಸಮತದಲ್ಲಿ ಗೆಲುವು ಸಾಧಿಸಿದ್ದು ಎಷ್ಟರ ಮಟ್ಟಿಗೆ ಸರಿ. ಕರ್ನಾಟಕದ ಸ್ಪೀಕರ್ ಸಂಪೂರ್ಣವಾಗಿ ಬಿಜೆಪಿ ಪಕ್ಷದ ವತ್ತಾರರಂತೆ ವರ್ತಿಸಿದ್ದಾರೆ. ಹೀಗಾಗಿ ಕೇಂದ್ರ ಸರಕಾರ ಇದನ್ನೆಲ್ಲಾ ಪರಿಗಣಿಸಿ ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಬೇಕು ಎಂದು ದೇವೇಗೌಡ ಆಗ್ರಹಿಸಿದರು.


ವಿಡಿಯೋಗಳು:
.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X