ಮಾಹಿತಿ ಹಕ್ಕು: ನ.1ರಿಂದ ಪ್ರತ್ಯೇಕ ಕಾಲ್ ಸೆಂಟರ್

ಮಾಹಿತಿ ತಂತ್ರಜ್ಞಾನದಲ್ಲಿ ಇಡೀ ವಿಶ್ವದ ಗಮನ ಸೆಳೆದಿರುವ ರಾಜ್ಯ ಸರ್ಕಾರ, ಇ-ಆಡಳಿತದಲ್ಲಿ ಅನೇಕ ಅವಿಷ್ಕಾರಗಳನ್ನು ರಾಜ್ಯ ಸರ್ಕಾರ ಮಾಡಿದೆ. ಇ-ಆಡಳಿತ ಇಲಾಖೆ ಮಾಹಿತಿ ಹಕ್ಕು ಯೋಜನೆಗಾಗಿಯೇ ಪ್ರತ್ಯೇಕ ಕರೆ ಕೇಂದ್ರವೊಂದನ್ನು ಇಡೀ ರಾಜ್ಯಕ್ಕೆ ಅನ್ವಯವಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ. ಮಾಹಿತಿ ಹಕ್ಕು ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಯಶಸ್ವಿಯಾಗಿ ಅನುಷ್ಠಾನ ಮಾಡಿದ ಕೀರ್ತಿಯೂ ರಾಜ್ಯ ಸರ್ಕಾರಕ್ಕೆ ಸಲುತ್ತಿದೆ.
ಬೆಂಗಳೂರು ಅನೇಕ ವಿದೇಶಿ ಕಂಪೆನಿಗಳ ಕರೆ ಕೇಂದ್ರಗಳನ್ನು ಹೊಂದಿದೆ. ಇದಲ್ಲದೇ ರಾಜ್ಯ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿಯೇ ಗ್ರಾಮೀಣ ಬಿಪಿಒ ಗಳನ್ನು ಸಹ ಆರಂಭಿಸಿದೆ. ಆದರೆ ಮಾಹಿತಿ ಹಕ್ಕಿಗಾಗಿಯೇ ಪ್ರತ್ಯೇಕವಾದ ಕಾಲ್ ಸೆಂಟರ್‌ವೊಂದು ಆರಂಭವಾಗುತ್ತಿರುವುದು ಇಡೀ ದೇಶದಲ್ಲಿಯೇ ಪ್ರಥಮ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ವಿದ್ಯಾಶಂಕರ್ ಹೇಳಿದರು.
ಕಾರ್ಯ ನಿರ್ವಹಣೆ ಹೇಗೆ ?: ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ಸಂಖ್ಯೆಯ ದೂರವಾಣಿಯನ್ನು ನೀಡಲಾಗುತ್ತದೆ. ಈಗ ಆರೋಗ್ಯ ಕವಚ, ಪೊಲೀಸ್, ಅಗ್ನಿಶಾಮಕಕ್ಕೆ ಪ್ರತ್ಯೇಕ ದೂರವಾಣಿ ಸಂಖ್ಯೆ ಇರುವಂತೆ ಈ ಕರೆ ಕೇಂದ್ರಕ್ಕೂ ಇರುತ್ತದೆ.
ರಾಜ್ಯದ ಯಾವುದೇ ಭಾಗದಿಂದ ಯಾವುದೇ ವಿಷಯಕ್ಕೆ ಸಂಬಂಸಿದಂತೆ ಯಾವ ಕಚೇರಿಯನ್ನು ಸಂಪರ್ಕಿಸಬೇಕು ಎಂಬ ಮಾಹಿತಿಯನ್ನು ಕೋರಿ ದೂರವಾಣಿ ಮಾಡಿದರೆ ಕ್ಷಣ ಮಾತ್ರದಲ್ಲಿ ಮನೆಗೆ ಕರೆ ಮಾಡಿ ಇಂತಹ ಇಲಾಖೆಯನ್ನು ಸಂಪರ್ಕಿಸಬಹುದು ಎಂಬ ಮಾಹಿತಿ ಬರುತ್ತದೆ. ಇದರಿಂದ ಯಾವುದೇ ಮಾಹಿತಿ ಪಡೆಯಲಿಚ್ಛಿಸುವವರು ಇಲಾಖೆಯಿಂದ ಇಲಾಖೆಗೆ ಅಲೆದಾಡುವುದು ತಪ್ಪುತ್ತದೆ. ಆ ಪ್ರಕಾರ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿದೆ.
ಮಾಹಿತಿ ಹಕ್ಕಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಈ ಕರೆ ಕೇಂದ್ರದ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ. ದಿನದ 24 ಗಂಟೆಗಳ ಕಾಲ ಈ ಕರೆ ಕೇಂದ್ರ ಕಾರ್ಯ ನಿರ್ವಹಣೆ ಮಾಡುತ್ತದೆ. ನವೆಂಬರ್ ಒಂದರಂದು ಇದರ ಉದ್ಘಾಟನೆಯ ಜತೆಗೆ ದೂರವಾಣಿ ಸಂಖ್ಯೆಯನ್ನು ರಾಜ್ಯದ ಜನತೆಗೆ ನೀಡಲಾಗುತ್ತದೆ. ಅಂದಿನಿಂದಲೇ ಈ ಕೇಂದ್ರ ಕಾರ್ಯ ಆರಂಭಿಸಲಿದೆ ಎಂದು ಎಂ.ಎನ್. ವಿದ್ಯಾಶಂಕರ್ ಹೇಳಿದರು..
ಈಗಾಗಲೇ ಕರೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಗುತ್ತಿಗೆ ಕರೆದು ಎಲ್ಲಾ ಸಿದ್ಧ ತೆ ಮಾಡಿಕೊಳ್ಳಲಾಗಿದೆ. ನವೆಂಬರ್ ಒಂದರಂದು ಇದರ ಉದ್ಘಾಟನೆಯ ಜತೆಗೆ ದೂರವಾಣಿ ಸಂಖ್ಯೆಯನ್ನು ರಾಜ್ಯದ ಜನತೆಗೆ ನೀಡಲಾಗುತ್ತದೆ. ಅಂದಿನಿಂದಲೇ ಈ ಕೇಂದ್ರ ಕಾರ್ಯ ಆರಂಭಿಸಲಿದೆ. ಎಲ್ಲಾ ಮಾಹಿತಿಯೂ ಕರೆ ಕೇಂದ್ರದಲ್ಲಿರುತ್ತದೆ ಎಂದು ತಿಳಿಸಿದರು.
ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications