ಕಾಮನ್ ವೆಲ್ತ್ ಕೂಟದ ಭ್ರಷ್ಟಾಚಾರಕ್ಕೆ ಬಿಜೆಪಿ ಹೋರಾಟ

ಕ್ರೀಡೆ ಹೆಸರಿನಲ್ಲಿ ನಡೆದಿರುವ ಈ ಭ್ರಷ್ಟಾಚಾರ ವಿಶ್ವದಲ್ಲೇ ಅತಿ ದೊಡ್ಡ ಹಗರಣವಾಗಿದೆ. ರಾಷ್ಟ್ರೀಯ ಹಿತಾಸಕ್ತಿಯಿಂದ ಹಾಗೂ ವಿವಾದಕ್ಕೆ ಆಸ್ಪದ ಕೊಡಬಾರದೆಂಬ ಉದ್ದೇಶದಿಂದ ಕ್ರೀಡಾಕೂಟ ಪೂರ್ಣಗೊಳ್ಳುವವರೆಗೂ ಈ ಕುರಿತು ಮಾತನಾಡದಿರಲು ಯುವ ಮೋರ್ಚಾ ನಿರ್ಧರಿಸಿತ್ತು. ಕ್ರೀಡಾಕೂಟ ಸಿದ್ಧತೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕಾಲಮಿತಿಯೊಳಗೆ ತನಿಖೆ ನಡೆಸಬೇಕು.
ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅದು ಒತ್ತಾಯಿಸಿದೆ. ಹನ್ನೆರಡು ದಿನಗಳು ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ 2003ರಲ್ಲಿ ನಿಗದಿಯಾಗಿದ್ದ ಬಜೆಟ್ 1899 ಕೋಟಿ ರೂ. ಆದರೆ 2010ರಲ್ಲಿ ಇದು 70 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಮೂಲ ವೆಚ್ಚಕ್ಕಿಂತ 17 ಪಟ್ಟು ಹೆಚ್ಚಿಸಲಾಗಿದೆ. ಈ ಏರಿಕೆ ಹಿಂದೆ ಕೆಲಸ ಮಾಡಿದವರು ಯಾರು ? ಎಂದು ಪ್ರಶ್ನಿಸಿದೆ. ಕ್ರೀಡಾಕೂಟದ ಹೊಣೆ ಹೊತ್ತಿದ್ದ ದಿಲ್ಲಿಯಲ್ಲಿ ಕಾಂಗ್ರೆಸ್ ಸರಕಾರವಿದೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವೇ ಅಧಿಕಾರದಲ್ಲಿದೆ. ಹೀಗಿರುವಾಗ ಅಕ್ರಮ, ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಭಾಗಿಯಾಗಿದೆ ಎಂಬ ಅನುಮಾನ ಬರುತ್ತದೆ.
70 ಸಾವಿರ ಕೋಟಿ ಗಳಲ್ಲಿ ಕ್ರೀಡಾಕೂಟಕ್ಕೆ ಖರ್ಚು ಮಾಡಿದ್ದು 150 ಕೋಟಿ ರೂ. ಭಾರತೀಯ ಕ್ರೀಡಾಪಟುಗಳಿಗೆ 350 ಕೋಟಿ ರೂ. ವ್ಯಯಿಸಲಾಗಿದೆ. ನೆಹರೂ ಕ್ರೀಡಾಂಗಣಕ್ಕೆ 961 ಕೋಟಿ ರೂ. ಖರ್ಚು ತೋರಿಸಲಾಗಿದೆ. ಆದರೆ ನವೀಕರಣಕ್ಕೆ ವೆಚ್ಚ ವಾಗಿರುವುದು ಕೇವಲ 100 ಕೋಟಿ ರೂ. ಮಾತ್ರ. ಉಳಿಕೆ 891 ಕೋಟಿ ರೂ.ಗಳು ಎಲ್ಲಿ ಹೋಯಿತು. ಈ ಕುರಿತು ದೇಶದ ಜನರಿಗೆ ಲೆಕ್ಕ ಕೊಡಬೇಕೆಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications