ಮುತಾಲಿಕ್ ಮುಖಕ್ಕೆ ಮಸಿ ಬಳಿದವನಿಗೆ ಪ್ರಶಸ್ತಿ

ಬೆಂಗಳೂರು, ಅ. 26 : ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮುಖಕ್ಕೆ ಮಸಿ ಬಳಿದಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತ ಶ್ರೀನಿವಾಸ್ ಅವರಿಗೆ ಅತ್ಯುತ್ತಮ ಕಾರ್ಯಕರ್ತ ಎಂದು ಕಾಂಗ್ರೆಸ್ ಪ್ರಶಸ್ತಿ ನೀಡಿದ್ದಕ್ಕೆ ಶ್ರೀರಾಮಸೇನೆ ತೀವ್ರವಾಗಿ ಖಂಡಿಸಿದೆ.

ಪ್ರೇಮಿಗಳ ದಿನಕ್ಕೆ ಸಂಬಂಧಿಸಿದಂತೆ ಸುವರ್ಣವಾಹಿನಿ ಆಯೋಜಿಸಿದ್ದ ನೇರಪ್ರಸಾರದ ಕಾರ್ಯಕ್ರಮವೊಂದರಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತ ಶ್ರೀನಿವಾಸ್ ನೇತೃತ್ವದಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮುಖಕ್ಕೆ ಮಸಿ ಬಳಿಯಲಾಗಿತ್ತು. ಸಂಸ್ಕೃತಿ ಉಳಿಸಲು ಹೋರಾಟ ನಡೆಸಿದ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿರುವ ಕೃತ್ಯಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಕಳೆದ ಎರಡು ವರ್ಷಗಳಿಂದ ಆರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಶ್ರೀನಿವಾಸ್ ವೀಕ್ಷಕನಾಗಿ ಉತ್ತಮ ಕೆಲಸ ಮಾಡಿದ್ದಾಗಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಹಿಂದೆಯಷ್ಟೇ ಶ್ರೀನಿವಾಸ್ ಗೆ ಅತ್ಯುತ್ತಮ ಕಾರ್ಯಕರ್ತ ಎಂಬ ಪ್ರಶಸ್ತಿ ನೀಡಿದ್ದರು. ಈ ವಿಷಯ ಇಂದು ಬೆಳಕಿಗೆ ಬರುತ್ತಿದ್ದಂತೆಯೇ, ಮುತಾಲಿಕ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದು ಮಸಿ ಬಳಿದವರು ಕಾಂಗ್ರೆಸ್ ಕಾರ್ಯಕರ್ತರೆ ಅಲ್ಲ ಎಂದು ಕಾಂಗ್ರೆಸ್ ಹೇಳಿತ್ತು. ಸ್ವತಃ ಯುವಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಅವರು ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ, ಅವರನ್ನು ಪಕ್ಷದಿಂದ ಅಮಾನತು ಮಾಡುವ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಆದರೆ, ಇದೀಗ ಗೊಂಡಾ ಪ್ರವೃತ್ತಿ ಹೊಂದಿರುವ ವ್ಯಕ್ತಿಯೊಬ್ಬನಿಗೆ ಅತ್ಯುತ್ತಮ ಪ್ರಶಸ್ತಿ ನೀಡುವ ಮೂಲಕ ತಮ್ಮ ಕಾಂಗ್ರೆಸ್ ಸಂಸ್ಕೃತಿಯನ್ನು ಬಹಿರಂಗಗೊಳಿಸಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+