ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಬಾರಿ ಒಟ್ಟು 125 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

By Rajendra
|
Google Oneindia Kannada News

Rajyotsava award for Ullas Karanth?
ಬೆಂಗಳೂರು, ಅ.27: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 125 ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಡದಲ್ಲಿ ಪದಕ ಗಳಿಸಿದ ರಾಜ್ಯದ ಕ್ರೀಡಾಪಟುಗಳಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಗುರುವಾರ (ಅ.28) 2009 ಮತ್ತು 2010ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಹುತೇಕ ಆಖೈರುಗೊಳಿಸಲಾಗಿದೆ.

ಮೂಲಗಳ ಪ್ರಕಾರ, ವನ್ಯಜೀವಿ ತಜ್ಞ ಡಾ.ಉಲ್ಲಾಸ ಕಾರಂತ, ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಜಾನಪದ ತಜ್ಞ ಪ್ರೊ.ಬಿ.ಆರ್.ಪಾಟೀಲ್, ಗಾಯಕಿ ಬಿ ಆರ್ ಛಾಯಾ, ಬಿಲ್ ಗೇಟ್ಸ್ ಫೌಂಡೇಷನ್ ಮೂಲಕ ಏಡ್ಸ್ ನಿರ್ಮೂಲನೆಗೆ ಶ್ರಮಿಸಿದ ಡಾ.ಎಸ್ ಎಸ್ ಹಳ್ಳಿ ಸೇರಿದಂತೆ ಸುಮಾರು 125 ಮಂದಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ದಕ್ಕಿದೆ.

ಪ್ರಶಸ್ತಿಯು ರು.1 ಲಕ್ಷ ನಗದು ಹಾಗೂ 20 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಸಂಭವಿಸಿದ ಕಾರಣ 2009ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿರಲಿಲ್ಲ. ಒಟ್ಟು 24 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಹಂಚಿಕೆಯಲ್ಲಿ ಎಲ್ಲಾ 31 ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ.

ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X