ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಂಧತಿ ರಾಯ್ ವಿರುದ್ದ ಕ್ರಮಕ್ಕೆ ಬಿಜೆಪಿ ಒತ್ತಡ

By Mrutyunjaya Kalmat
|
Google Oneindia Kannada News

Arundhati Roy
ಚೆನ್ನೈ, ಅ. 28 : ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ಹಾಗೂ ಬರಹಗಾರ್ತಿ ಅರುಂಧತಿ ರಾಯ್ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕೇಂದ್ರದ ಯುಪಿಎ ಸರಕಾರ ಕೂಡಲೇ ಉಗ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು, ಕಾಶ್ಮೀರ ಮತ್ತು ಪ್ರತ್ಯೇಕತಾವಾದಿಗಳ ಕುರಿತು ತನ್ನ ನೀತಿಯನ್ನು ಕೇಂದ್ರ ಸ್ಪಷ್ಟಪಡಿಸಬೇಕು ಎಂದು ಅದು ಒತ್ತಾಯಿಸಿದೆ. ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆ ನಡೆದು ಕಾಶ್ಮೀರದಲ್ಲಿ ಚುನಾಯಿತ ಸರಕಾರವೊಂದು ಇರುವಾಗ ಆ ರಾಜ್ಯ ಭಾರತದ ಅವಿಭಾಜ್ಯ ಅಂಗವಲ್ಲವೆಂದು ಕೆಲವರು ಹೇಗೆ ಹೇಳಲು ಸಾಧ್ಯ, ಇದು ಅವಹೇಳನಕಾರಿ ಹೊರತು ಮತ್ತೇನೂ ಅಲ್ಲ ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಕ್ ಸ್ವಾತಂತ್ರದ ಹೆಸರಿನಲ್ಲಿ ದೇಶದ ಏಕತೆ ಮತ್ತು ಸಮಗ್ರತೆಗೆ ಸವಾಲು ಹಾಕಲು ನಾವು ಅವಕಾಶ ನೀಡುವುದಿಲ್ಲ. ಬಿಕ್ಕಟ್ಟು ಸೃಷ್ಟಿಯಾಗಿರುವ ರಾಜ್ಯ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರತಿಪಾದಿಸಿದರು. ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವೆಂದು ಸಂಸತ್ತು ಅವಿರೋಧವಾಗಿ ಗೊತ್ತುವಳಿಯನ್ನು ಆಂಗೀಕರಿಸಿದೆ. ಅವರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ಮಿಗಿಲಾಗಿ ಯಾರೂ ಇಲ್ಲ, ಹಾಗಾಗಿ ಅರುಂಧತಿ ರಾಯ್ ವಿರುದ್ಧ ಉಗ್ರ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X