ಅಭಿವೃದ್ಧಿಯಲ್ಲಿ ಗುಜರಾತ್ ನಂ.1; ಕರ್ನಾಟಕ ನಂ.2

51 ಅಂಕಗಳನ್ನು ಪಡೆದುಕೊಂಡಿರುವ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿರುವ ಗುಜರಾತ್ ಮೊದಲ ಸ್ಥಾನ ಪಡೆದುಕೊಂಡಿದೆ. ನಂತರದ ಸ್ಥಾನ ಕರ್ನಾಟಕ, ಜಾರ್ಖಂಡ್, ಪಂಜಾಪ್ ಮತ್ತು ಉತ್ತರ ಪ್ರದೇಶಗಳ ಪಾಲಾಗಿವೆ. 2010ರ ಏಪ್ರಿಲ್-ಜುಲೈಯಲ್ಲಿ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಕಳೆದ ವರ್ಷದ ರಾಜ್ಯಗಳ ಸಾಧನೆ ಪಟ್ಟಿಯಲ್ಲಿ ಗುಜರಾತ್ ನಾಲ್ಕನೇ ಸ್ಥಾನದಲ್ಲಿದ್ದರೆ, ಕರ್ನಾಟಕ ಏಳನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಭಾರೀ ಮುನ್ನಡೆ ಸಾಧಿಸಿವೆ.
ಈಶಾನ್ಯ ರಾಜ್ಯಗಳೂ ಸೇರಿದಂತೆ ಬಿಹಾರ, ಪಶ್ಚಿಮ ಬಂಗಾಲ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಹಾಗೂ ಛತ್ತೀಸ್‌ಗಢ ಮುಂತಾದ ರಾಜ್ಯಗಳು ಕಳಪೆ ಸಾಧನೆ ಮಾಡಿವೆ. ದೆಹಲಿ, ರಾಜಸ್ತಾನ, ತಮಿಳುನಾಡು ಮೊದಲ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿವೆ.
ಸಮಾಜದ ಕೆಳಸ್ತರ ಮತ್ತು ಬಡವರ ಜೀವನ ಮಟ್ಟ ಸುಧಾರಣೆ, ಕೃಷಿಕರ ರಕ್ಷಣೆ, ಕಾರ್ಮಿಕರ ಅಭಿವೃದ್ಧಿ, ವಸತಿ, ಶಿಕ್ಷಣ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸುಧಾರಣೆ, ಪರಿಶಿಷ್ಟ ಜಾತಿ ಕುಟುಂಬಗಳಿಗೆ ಸಹಕಾರ, ಬಡತನ ನಿರ್ಮೂಲನೆ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ ಮುಂತಾದ 19 ಮಾನದಂಡಗಳ ಮೇಲೆ ರಾಜ್ಯಗಳ ಸಾಧನೆಗಳನ್ನು ಅಳತೆ ಮಾಡಲಾಗಿದೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS












Click it and Unblock the Notifications