ಕಾಮನ್ ವೆಲ್ತ್ ಗುತ್ತಿಗೆದಾರರ ಮೇಲೆ ಐಟಿ ದಾಳಿ
ನವದೆಹಲಿ,
ಅ. 29 : ದೆಹಲಿಯಲ್ಲಿ ನಡೆದ 2010 ಕಾಮನ್‌ವೆಲ್ತ್ ಗೇಮ್ಸ್ ಗುತ್ತಿಗೆಗಳಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರದ ತನಿಖೆ ನಡೆಸುತ್ತಿರುವ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದೇಶದ್ಯಾಂತ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾ ಸಾಮಾಗ್ರಿ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. id="toptextpromo">ಈ
ಕಾರ್ಯಾಚರಣೆಯಲ್ಲಿ ಸುಮಾರು 300 ಹೆಚ್ಚು ಅಧಿಕಾರಿಗಳು ಪಾಲ್ಗೊಂಡಿದ್ದರು. ಕ್ರೀಡಾ ಕೂಟದ ಗುತ್ತಿಗೆ ಪಡೆದವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಯದಿದೆ. ಬೆಂಗಳೂರು, ದಿಲ್ಲಿ, ಕೊಲ್ಕತ್ತಾ, ಮುಂಬೈ ಸೇರಿ ದಂತೆ ಐಟಿ ಅಧಿಕಾರಿಗಳು ದೇಶದ 50ಕ್ಕೂ ಹೆಚ್ಚು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು. id='are-slot-1' class='oiad oi-axt oiadv'> id='top-searched-articles'>ಈ
ಮೂಲಕ ಕಾಮನ್‌ವೆಲ್ತ್ ಆಯೋಜಕ ಸಮಿತಿಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಲಂಚ ಪ್ರಕರಣಗಳನ್ನು ತನಿಖೆ ನಡೆಸಲಾಗುತ್ತಿದೆ. ಈ ಹಿಂದೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ಅಂದರೆ ಇದೇ ತಿಂಗಳ 19ರಂದು 700 ಕೋಟಿ ರೂ.ಗಳ ಗುತ್ತಿಗೆ ಪಡೆದುಕೊಂಡಿದ್ದ ಬಿಜೆಪಿ ಸದಸ್ಯ ಸುಧಾಂಶು ಮಿತ್ತಲ್ ರವರ ಸಂಸ್ಥೆ ಸೇರಿದಂತೆ ನಾಲ್ಕು ಪ್ರಮುಖ ಕಂಪೆನಿಗಳ ಮೇಲೆ ದಾಳಿ ನಡೆಸಿದರು.











Click it and Unblock the Notifications