ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವಸ್ಥಾನದ ಸುತ್ತ ಮುತ್ತ ಪ್ಲಾಸ್ಟಿಕ್ ಹಾಕಿದ್ರೆ ದಂಡ

By Mahesh
|
Google Oneindia Kannada News

Plastic ban in Temples
ಬೆಂಗಳೂರು, ಅ.30: ಪರಿಸರ ಮಾಲಿನ್ಯಕ್ಕೆ ಹೆಚ್ಚಳಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿರುವ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೇವಸ್ಥಾನದ ಒಳಗೆ ಹಾಗೂ ಸುತ್ತಮುತ್ತಾ 100 ಅಡಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆ ಮತ್ತು ಮಾರಾಟದ ಮೇಲೆ ನಿಷೇಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ಕೃಷ್ಣ ಪಾಲೇಮಾರ್ ಹೇಳಿದ್ದಾರೆ.

ಬೆಂಗಳೂರು ಮೀಡಿಯಾ ಸೆಂಟರ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿಯಾಗಿ ಆಯೋಜಿಸಿದ 'ಪೊಲ್ಯುಟೆಕ್ ಇಂಡಿಯಾ 2010" ರಾಷ್ಟ್ರೀಯ ವಿಚಾರಗೋಷ್ಠಿಯಲ್ಲಿ ಶುಕ್ರವಾರ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಕಟ್ಟುನಿಟ್ಟಿನ ಕ್ರಮ : ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಗುತ್ತದೆ. ಆದೇಶ ಉಲ್ಲಂಘಿಸುವವರಿಗೆ ಎಚ್ಚರಿಕೆಯನ್ನು ನೀಡಲಾಗುತ್ತದೆ. ಸದ್ಯಕ್ಕೆ ದಂಡ ವಿಧಿಸುವುದಾಗಲಿ ಅಥವಾ ಅಂತಹವರ ಮೇಲೆ ಕ್ರಮಕೈಗೊಳ್ಳಲಾಗುವುದಿಲ್ಲ. ಮುಂದೊಂದು ದಿನ ಶಿಕ್ಷೆ ಕಟ್ಟುನಿಟ್ಟಾಗಿ ಜಾರಿಯಾಗಬಹುದು" ಎಂದರು.

'ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರೂಪಿಸಲಾಗುವ ಎಲ್ಲ ಯೋಜನೆಗಳಿಗೆ ಸರ್ಕಾರ ಸಾಕಷ್ಟು ಧನ ಸಹಾಯ ನೀಡುತ್ತಿದೆ. ಹಣದ ಕೊರತೆಯಿಲ್ಲ. ಯೋಜನೆಗಳು ಮಾತ್ರ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಇದಕ್ಕೆ ಕೈಗಾರಿಕೋದ್ಯಮಿಗಳು ಸಹಕಾರ ನೀಡಬೇಕು' ಎಂದು ಅವರು ಕೋರಿದರು.

ಪಶ್ಚಿಮ ಘಟ್ಟ ಉಳಿಸಲು ವಿಶೇಷ ಯೋಜನೆ: 'ಒಂದುಕಾಲದಲ್ಲಿ 4,800 ವಿಶಿಷ್ಟ ಸಸ್ಯತಳಿಗಳಿದ್ದ ಪಶ್ಚಿಮ ಘಟ್ಟದಲ್ಲಿ ಇಂದು ಬೆರಳಣಿಕೆಯಷ್ಟು ಮಾತ್ರ ಉಳಿದಿವೆ. ಇವುಗಳನ್ನು ಉಳಿಸಿಕೊಳ್ಳಲು ಮಂಗಳೂರು ಬಳಿಯ ಪಿಲಿಕುಳದಲ್ಲಿ ಜೈವಿಕ ಉದ್ಯಾನ ನಿರ್ಮಿಸಲಾಗುವುದು. ಇದಕ್ಕಾಗಿ ಸರ್ಕಾರವು 2.5 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಇದರ ಜೊತೆಯಲ್ಲಿ ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಪ್ರವಾಸೋದ್ಯಮ ಇಲಾಖೆಯು ರೂ. 15 ಕೋಟಿ ಯೋಜನೆ ಹಾಕಿಕೊಂಡಿದೆ' ಎಂದರು.

ಪರಿಸರ ತಜ್ಞ ಡಾ.ಎ.ಎನ್. ಯಲ್ಲಪ್ಪ ರೆಡ್ಡಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್. ಸದಾಶಿವಯ್ಯ, ಮಂಡಳಿಗೆ ಸಲಹೆಗಾರರಾಗಿರುವ ಡಾ.ಜುರ್ಗನ್ ಪೊರ್ಸ್ಟ್, ಬೆಂಗಳೂರು ಮೀಡಿಯಾ ಸೆಂಟರ್‌ನ ಯೋಜನಾಧಿಕಾರಿ ಎಸ್.ರಮೇಶ್, ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಲೋಕೇಶ್ ಉಪಸ್ಥಿತರಿದ್ದರು.


ವಿಡಿಯೋಗಳು:
.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X