ರಾಜ್ಯೋತ್ಸವ ಬಹಿಷ್ಕರಿಸಲು ಎಂಇಎಸ್ ತೀರ್ಮಾನ
ಬೆಳಗಾವಿ,
ಅ. 31 : ನವೆಂಬರ್ ಒಂದರಂದು ಕರ್ನಾಟಕದಾದ್ಯಂತ ನಡೆಯಲಿರುವ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಅಂದು ಕರಾಳ ದಿನ ಆಚರಿಸಲು ನಿರ್ಧರಿಸಿದೆ. ಎಂಇಎಸ್ ಕರಾಳ ದಿನಾಚರಣೆಯನ್ನಾಗಿ ಆಚರಿಸಲು ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಇಎಸ್ ಮುಖಂಡ ವಿಕೆ ಪಾಟೀಲ್, ರಾಜ್ಯೋತ್ಸವವನ್ನು ನಾವು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ. ಜಿಲ್ಲಾಡಳಿತ ಕೂಡಾ ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಅಂದು ನಾವುಗಳು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಬೆಳಗಾವಿ
ಜಿಲ್ಲಾಡಳಿದ ಕ್ರಮಕ್ಕೆ ಕರ್ನಾಟಕ ರಕ್ಷಣೆ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದ ಭಾಗವಾಗಿರುವ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಬೆಳಗಾವಿ ಜಿಲ್ಲಾಡಳಿತ ಕರಾಳ ಆಚರಿಸಲು ಅನುಮತಿ ನೀಡಿದ್ದಾದರೂ ಹೇಗೆ ? ಇದರ ವಿರುದ್ಧ ವೇದಿಕೆ ಹೋರಾಟ ನಡೆಸಲಿದೆ ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.











Click it and Unblock the Notifications