ಬೆಂಗಳೂರು, ನ. 2 : ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭೆಯ ಸ್ಪೀಕರ್ ಕೆಜೆ ಬೋಪಯ್ಯ ಅವರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಆರಂಭವಾಗಿದೆ.
ಈ ಸಂಬಂಧ ಸಲ್ಲಿಸಲಾಗಿರುವ ಎರಡು ಅರ್ಜಿಗಳು ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣಪೀಠವನ್ನು ರಚಿಸಲಾಗಿದೆ. ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ಎಎಸ್ ಬೋಪಣ್ಣ ಮತ್ತು ಎಸ್ ಅಬ್ಧುಲ್ ನಜೀರ್ ಅವರನ್ನು ಒಳಗೊಂಡ ಪೀಠ ವಿಚಾರಣೆ ಆರಂಭಿಸಿದೆ.