ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.24ರಿಂದ 77ನೇ ಕಸಾಪ ಸಾಹಿತ್ಯ ಸಮ್ಮೇಳನ

By Mrutyunjaya Kalmat
|
Google Oneindia Kannada News

Dr Nallur Prasad
ಬೆಂಗಳೂರು, ನ.3 : 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 24, 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದೇ 10 ರಂದು ನಡೆಯಲಿರುವ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯರ ಆಯ್ಕೆ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮ್ಮೇಳನದ ಸ್ವಾಗತ ಸಮಿತಿ ಕಚೇರಿಯ ಉದ್ಘಾಟನೆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಕೆ.ಆರ್. ನಲ್ಲೂರು ಪ್ರಸಾದ್, ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸಹ ಬಿಡುಗಡೆಗೊಳಿಸಲಾಯಿತು.

40 ವರ್ಷಗಳ ನಂತರ ಬೆಂಗಳೂರಿನಲ್ಲಿ ಸಮ್ಮೇಳನ ನಡೆಯುತ್ತಿದೆ. ಐಟಿ, ಬಿಟಿಗಳಿಂದ ಕಂಗೊಳಿಸುತ್ತಿರುವ ನಗರದಲ್ಲಿ ಸಮ್ಮೇಳನ ಮಾಡಬೇಕೆಂಬ ಬಯಕೆ ಇತ್ತು. ಕ್ರಿಸ್‌ಮಸ್ ರಜೆಯ ಹಿನ್ನೆಲೆಯಲ್ಲಿ ಎಲ್ಲರಿಗೂ ಭಾಗವಹಿಸಲು ಅನುಕೂಲವಾಗುವುದು ಎಂಬ ಕಾರಣ ಡಿಸೆಂಬರ್ ವಾರಾಂತ್ಯದಲ್ಲಿ ಸಮ್ಮೇಳನ ನಡೆಸಲಾಗುತ್ತಿದೆ ಎಂದರು.

ನ.10ರಂದು ನಡೆಯುವ ಕಾರ್ಯಕಾರಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಹೆಸರನ್ನೂ ಘೋಷಿಸಲಾಗುವುದು. ಕಸಾಪದಿಂದ ಸಮ್ಮೇಳನಾಧ್ಯಕ್ಷರಿಗೆ ಹಣ ಕೊಡುವುದಿಲ್ಲ. ಅದ್ಧೂರಿ ಊಟೋಪಚಾರ ಇರುವುದಿಲ್ಲ. ಸರಳ ಮತ್ತು ಶುದ್ಧವಾದ ಆಹಾರ ನೀಡುತ್ತೆವೆ. ಪ್ರತಿನಿಧಿಗಳಿಗೆ ಬ್ಯಾಗ್, ಸೇಂಟ್ ಕೊಡುವ ಸಂಪ್ರದಾಯಕ್ಕೆ ಕಡಿವಾಣ ಹಾಕಲಾಗಿದೆ. ಮೌಲ್ಯಯುತವಾದ 8 ಗ್ರಂಥಗಳನ್ನು ಪ್ರಕಟಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X