ಪಕ್ಷೇತರರ ಅನರ್ಹತೆ ವಿಚಾರಣೆಗೆ ಹೊಸ ತಿರುವು

ಹೊಸದುರ್ಗದ ಟಿಟಿ ನಾಗರಾಜ್ ಮತ್ತು ಗಂಗಾವತಿಯ ಯಮನಪ್ಪ ಎಂಬಿಬ್ಬರು, ಪಕ್ಷೇತರ ಶಾಸಕರು ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಕೆಜಿ ಬೋಪಯ್ಯ ಅವರಿಗೆ ನೀಡಲಾಗಿದ್ದ ಪತ್ರಕ್ಕೆ ಬಲವಂತವಾಗಿ ಸಹಿ ಹಾಕಿಸಿಕೊಳ್ಳಲಾಗಿತ್ತು ಎಂದು ಮಧ್ಯಂತರ ಅರ್ಜಿಯಲ್ಲಿ ತಿಳಿಸಿ ಈ ಪ್ರಕರಣಕ್ಕೆ ಹೊಸ ಸ್ವರೂಪ ನೀಡಿದ್ದಾರೆ.
ಈ ಇಬ್ಬರು ಮತ್ತು ಹಿರಿಯೂರಿನ ಬಸವರಾಜ್, ಮಳವಳ್ಳಿಯ ಲಿಂಗೇಗೌಡ ಮತ್ತು ಪಾವಗಡದ ಕೃಷ್ಣಾ ನಾಯಕ್ ಎಂಬ ಐವರು ಪಕ್ಷೇತರ ಶಾಸಕರ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಇಬ್ಬರು ಈಗ ಸರಕಾರದ ವಿರುದ್ಧ ತಿರುಗಿ ನಿಂತಿದ್ದಾರೆ. ಬಿಜೆಪಿ ಶಾಸಕರ ಅನರ್ಹತೆ ಕುರಿತಂತೆ ನೀಡಲಾಗಿರುವ ತೀರ್ಪಿನಲ್ಲಿ ಶಾಸಕರನ್ನು ಅನರ್ಹಗೊಳಿಸುವಾಗ ಸಭಾಧ್ಯಕ್ಷ ಯಾವುದೇ ದುರುದ್ದೇಶದಿಂದ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿಸಲಾಗಿತ್ತು.
ನಮಗೆ ಪಕ್ಷೇತರರ ವಿರುದ್ಧ ದೂರು ನೀಡುವ ಯಾವುದೇ ಉದ್ದೇಶವಿರಲಿಲ್ಲ. ಆದರೆ ಈಡಿಗರ ಸಮಾವೇಶಕ್ಕೆಂದು ಬೆಂಗಳೂರಿಗೆ ಅ.9ರಂದು ಬಂದಾಗ ಮಂಡಳಿಗಳಿಗೆ ಸದಸ್ಯರನ್ನಾಗುವ ಆಮಿಷ ತೋರಿಸಿ ಬಲವಂತವಾಗಿ ಸುರೇಶ್ ಕುಮಾರ್ ಅವರ ಸಮ್ಮುಖದಲ್ಲಿ ಸಹಿ ಹಾಕಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಮಧ್ಯಂತರ ಅರ್ಜಿಗೆ ಪ್ರತಿ ಹೇಳಿಕೆ ನೀಡಲು ಸರಕಾರಕ್ಕೆ ಕಾಲಾವಕಾಶ ನೀಡಲಾಗಿದೆ. ಶುಕ್ರವಾರ ಕರ್ನಾಟಕ ಹೈಕೋರ್ಟಿನಲ್ಲಿ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ನ್ಯಾ. ಎಎಸ್ ಬೋಪಣ್ಣ ಮತ್ತು ನ್ಯಾ. ಎಸ್ ಅಬ್ಧುಲ್ ನಜೀರ್ ಅವರನ್ನೊಳಗೊಂಡ ವಿಭಾಗೀಯ ಪೀಠದೆದಿರು ವಿಚಾರಣೆಗೆ ಬರಲಿದೆ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications