ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ಬೆಲೆ ಲೀಟರ್‌‍ಗೆ 32 ಪೈಸೆ ಹೆಚ್ಚಳ

By Rajendra
|
Google Oneindia Kannada News

IOC, HPCL hike prices of petrol
ನವದೆಹಲಿ, ನ.9: ಪೆಟ್ರೋಲ್ ದರವನ್ನು ಲೀಟರ್‌ಗೆ 32 ಪೈಸೆಯಂತೆ ಹೆಚ್ಚಿಸಲಾಗಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ಹೊಸ ದರಗಳು ಜಾರಿಯಾಗುವಂತೆ ಸರಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ಸೂಚಿಸಿದೆ.

ಹಿಂದೂಸ್ಥಾನ್ ಪೆಟ್ರೋಲಿಯಮ್ ಕಾರ್ಪೋರೇಷನ್ (ಎಚ್ ಪಿಸಿಎಲ್) ಈಗಾಗಲೆ ಪೆಟ್ರೋಲ್ ಬೆಲೆಯನ್ನು ಲೀಟರಿಗೆ 31 ಪೈಸೆಯಷ್ಟು ಹೆಚ್ಚಿಸಿದ್ದು, ಈ ಏರಿಕೆ ಕೂಡ ಸೋಮವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಬೆಲೆ ಏರಿಕೆ ಅನಿವಾರ್ಯ ಎಂದು ಐಒಸಿ ಅಧ್ಯಕ್ಷ ಬಿ ಎಂ ಬನ್ಸಾಲ್ ಸ್ಪಷ್ಟಪಡಿಸಿದ್ದಾರೆ.

ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಐಒಸಿಗೆ ರು.1 ನಷ್ಟವಾಗುತ್ತಿದೆ. ಈ ಹಿಂದೆ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 81 ರಿಂದ 82 ಡಾಲರ್ ಇದ್ದದ್ದು ಈಗ 87 ಡಾಲರ್‌ಗೆ ಏರಿಕೆ ಆಗಿದೆ. ಈ ವರ್ಷದ ಜೂನ್‌ನಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುರುವು ಇದು ಮೂರನೇ ಬಾರಿ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X